Monday, June 22, 2026
spot_imgspot_img
spot_imgspot_img

ಬೆಳ್ತಂಗಡಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರ ಬಂಧನಕ್ಕೆ ಆಗ್ರಹಿಸಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಎಸ್.ಡಿ.ಪಿ.ಐ

- Advertisement -
- Advertisement -

ಬೆಳ್ತಂಗಡಿ: ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆನ್ನಲಾದ ಬಿಜೆಪಿ ಕಾರ್ಯಕರ್ತರ ವಿರುದ್ಧ ದೂರು ನೀಡಿ ಮೂರು ದಿನ ಕಳೆದರೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ಆಪಾದಿಸಿರುವ ಎಸ್.ಡಿ.ಪಿ.ಐ ಕಾರ್ಯಕರ್ತರು ಇಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ.

ಠಾಣೆಯ ಮುಂದೆ ನೂರಾರು ಪ್ರತಿಭಟನಕಾರರು ಜಮಾಯಿಸಿದ್ದು ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ. ಡಿವೈಎಸ್ ಪಿ ವ್ಯಾಲೆಂಟೈನ್ ಡಿಸೋಜಾ ಸ್ಥಳಕ್ಕೆ ಆಗಮಿಸಿದ್ದು ಪ್ರತಿಭಟನಕಾರರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.

ಪ್ರತಿಭಟನಕಾರರನ್ನು ತಡೆಯಲು ಪೊಲೀಸರು ಬ್ಯಾರಿಕೇಡ್ ಹಾಕಿದ್ದಾರೆ. ಪ್ರತಿಭಟನೆಯಲ್ಲಿ ಎಸ್.ಡಿ.ಪಿ.ಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸೊ ಫ್ರಾಂಕೊ, ದ.ಕ. ಜಿಲ್ಲಾ ಉಪಾಧ್ಯಕ್ಷ ಪಿ.ಡಿ. ಆಂಟನಿ, ವಿಧಾನಸಭಾ ಸಮಿತಿ ಸದಸ್ಯ ನವಾಝ್ ಕಟ್ಟೆ ಮುಂತಾದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!