Monday, September 7, 2026
spot_imgspot_img
spot_imgspot_img

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದೈವಸ್ಥಾನ ಕಳವು ಪ್ರಕರಣದ ಆರೋಪಿ ಬಂಧನ

- Advertisement -
- Advertisement -

ಮೂಡಬಿದ್ರಿ: ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೈವಸ್ಥಾನ ಕಳವು ಪ್ರಕರಣದಲ್ಲಿ ಸುಮಾರು 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್‌ ಆರೋಪಿಯನ್ನು ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಮುಲ್ಕಿ ಪೊಲೀಸ್ ಠಾಣೆಯ ಅ.ಕ್ರ.70/2018ರ ಕಲಂ 454, 457, 380 ಐಪಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂಡಬಿದ್ರಿಯ ಮಾನ್ಯ ಹಿರಿಯ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಸಿಸಿ ನಂ.462/2023ರ ವಿಚಾರಣೆ ನಡೆಯುತ್ತಿತ್ತು. ಪ್ರಕರಣದ ಆರೋಪಿಯಾದ ನಾಗರಾಜನ್ (38), ಸೆಲ್ವರಾಜ್ ಅವರ ಪುತ್ರ, ತಿರುಪ್ಪುರ ಜಿಲ್ಲೆ, ತಮಿಳುನಾಡು ಎಂಬಾತ ಸುಮಾರು ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.

ಆತನ ವಿರುದ್ಧ ನ್ಯಾಯಾಲಯದಿಂದ ದಸ್ತಗಿರಿ ವಾರಂಟ್ ಹಾಗೂ ಪ್ರೊಕ್ಲಮೇಷನ್ ಹೊರಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಮುಲ್ಕಿ ಪೊಲೀಸರು ತಮಿಳುನಾಡಿನ ತಿರುಪ್ಪುರದಲ್ಲಿ ನಾಗರಾಜನ್‌ನನ್ನು ಬಂಧಿಸಿದ್ದಾರೆ.

ಬಳಿಕ ಆರೋಪಿಯನ್ನು ಈ ದಿನ ಮೂಡಬಿದ್ರಿಯ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Related news

error: Content is protected !!