




ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕೈದಿಗಳು ಜೈಲಿನೊಳಗೆ ನಿಷೇಧಿತ ಮೊಬೈಲ್ ಫೋನ್ ಬಳಸುತ್ತಿರುವ ಖಚಿತ ಮಾಹಿತಿ ಮೇರೆಗೆ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಪೊಲೀಸರು ಅನಿರೀಕ್ಷಿತ ದಾಳಿ ನಡೆಸಿದ್ದು, 9 ಕೈದಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಕರಣದ ತನಿಖೆ ಹಿನ್ನೆಲೆಯಲ್ಲಿ ಜಿಲ್ಲಾ ಕಾರಾಗೃಹಕ್ಕೆ ಅನಿರೀಕ್ಷಿತ ದಾಳಿ ನಡೆಸಿ ತಪಾಸಣೆ ನಡೆಸಿದಾಗ ಎ-ಬ್ಲಾಕ್‌ನಲ್ಲಿದ್ದ ಕೈದಿಗಳಿಂದ ಅಕ್ರಮವಾಗಿ ಬಚ್ಚಿಟ್ಟಿದ್ದ 10 ಮೊಬೈಲ್ ಸ್ಮಾರ್ಟ್‌ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
1) ರಿಫತ್ ಅಲಿ, 2) ಇಬ್ರಾಹಿಂ ಖಲೀಲ್, 3) ಅಸ್ಫಕ್ ಅಲಿಯಾಸ್ ಜುಟ್ಟು ಅಸ್ಫಕ್, 4) ಅರ್ಷದ್, 5) ದಾವುದ್ ಫರ್ವೇಜ್, 6) ನಝರತ್ ಅಲಿ, 7) ಶಿಫಾನ್, 8) ಅಬ್ದುಲ್ ಸಾದೀಕ್, 9) ಅರ್ಫಜ್ ಆರೋಪಿಗಳು.
ಇವರಲ್ಲಿ ರಿಫತ್ ಅಲಿ, ಇಬ್ರಾಹಿಂ ಖಲೀಲ್, ಅಸ್ಫಕ್ ಅಲಿಯಾಸ್ ಜುಟ್ಟು ಅಸ್ಫಕ್, ಅರ್ಷದ್ ಇತ್ತೀಚೆಗೆ ತೊಕ್ಕೊಟ್ಟು ಬಳಿ ನಡೆದ ಆರೀಫ್ ಕೊಲೆ ಪ್ರಕರಣದ ಆರೋಪಿಗಳಾಗಿದ್ದಾರೆ.
ದಾವುದ್ ಫರ್ವೇಜ್, ನಝರತ್ ಅಲಿ, ಶಿಫಾನ್, ಅಬ್ದುಲ್ ಸಾದೀಕ್, ಎನ್‌ಡಿಪಿಎಸ್ ಡ್ರಗ್ ಪೆಡ್ಲರ್ ಆರೋಪಿಗಳು. 9ನೇ ಕೈದಿ ಅರ್ಫಜ್ ಕಂಕನಾಡಿ ನಗರ ಠಾಣೆಯ ಕೋಕಾ ಪ್ರಕರಣದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಸೆ.08 ರ ರಾತ್ರಿ ಬರ್ಕೆ ಠಾಣೆ ಅ.ಕ್ರ. 82/2026, ಕಲಂ 323 ಬಿಎನ್‌ಎಸ್ ಹಾಗೂ ಕಲಂ 42 ಕರ್ನಾಟಕ ಕಾರಾಗೃಹ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಮೊಬೈಲ್ ಫೋನ್‌ಗಳ ಬಳಕೆ ಮತ್ತು ಪೂರೈಕೆಗೆ ಸಂಬಂಧಿಸಿದಂತೆ ಬರ್ಕೆ ಪೊಲೀಸ್ ಠಾಣೆಯಲ್ಲಿ ತನಿಖೆ ಮುಂದುವರಿದಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಇತರ ಮಾಹಿತಿಗಳನ್ನು ಸಹ ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.








