- Advertisement -
- Advertisement -

ಕಡಬ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಗ್ರಾಮದ ವಿದ್ಯಾನಗರದಲ್ಲಿ ಯು-ಟರ್ನ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ‘ನೆಲ್ಯಾಡಿ ಯು ಟರ್ನ್ ಹೋರಾಟ ಸಮಿತಿ’ ವತಿಯಿಂದ ಸೆ.9ರಂದು ಪ್ರತಿಭಟನೆ ನಡೆಯಲಿದೆ.ಬೆಳಗ್ಗೆ 9.30ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನೆಲ್ಯಾಡಿ ಗಾಂಧಿ ಮೈದಾನದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಪೊಲೀಸ್ ಇಲಾಖೆ ಷರತ್ತುಬದ್ಧ ಅನುಮತಿ ನೀಡಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ಸುಗಮ ಸಂಚಾರಕ್ಕೆ ಯಾವುದೇ ರೀತಿಯ ಅಡಚಣೆ ಉಂಟುಮಾಡದಂತೆ ಪ್ರತಿಭಟನೆ ನಡೆಸುವುದಾಗಿ ಸಂಘಟಕರು ಭರವಸೆ ನೀಡಿದ್ದಾರೆ.
ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ರಸ್ತೆ ತಡೆ ನಡೆಸಲಾಗುತ್ತದೆ ಎಂಬ ವದಂತಿಗಳು ಹರಿದಾಡುತ್ತಿವೆ. ಪ್ರತಿಭಟನೆಯ ಸಂದರ್ಭದಲ್ಲಿ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟುಮಾಡಿದರೆ, ಸಂಘಟಕರು, ಆಯೋಜಕರು ಹಾಗೂ ಪ್ರತಿಭಟನೆಯಲ್ಲಿ ಭಾಗವಹಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.
- Advertisement -








