Wednesday, September 9, 2026
spot_imgspot_img
spot_imgspot_img

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿದ್ಯಾಶಂಕರ್ ಡಿ. ಅವರಿಗೆ ಸನ್ಮಾನ

- Advertisement -
- Advertisement -


ವಿಟ್ಲ: ದಿ ನಾಲೇಡ್ಜ್ ಹಬ್ ಶಿಕ್ಷಣ ಸಂಸ್ಥೆಯ ವತಿಯಿಂದ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ, ವಿಟ್ಲ ಪಿಎಂಶ್ರೀ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ವಿದ್ಯಾಶಂಕರ್ ಡಿ. ಅವರನ್ನು ಸನ್ಮಾನಿಸಲಾಯಿತು.


ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ವಿದ್ಯಾಶಂಕರ್ ಡಿ. ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದ್ದು, ಈ ಹಿನ್ನೆಲೆಯಲ್ಲಿ ನಾಲೇಡ್ಜ್ ಹಬ್ ವತಿಯಿಂದ ಗೌರವ ಸಮರ್ಪಿಸಲಾಯಿತು.


ಕಾರ್ಯಕ್ರಮದಲ್ಲಿ ಪಿಎಂಶ್ರೀ ಶಾಲೆಯ ಶಿಕ್ಷಕಿ ಶ್ರೀಮತಿ ಕೆ., ನಾಲೇಡ್ಜ್ ಹಬ್‌ನ ಶಿಕ್ಷಕರಾದ ಮುಸ್ತಫಾ ಖಲೀಲ್ ವಿಟ್ಲ, ಉಮಾನಾಥ್ ಹಾಗೂ ಸುರೈಯ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ವಿದೀಶಾ ಸ್ವಾಗತಿಸಿದರು. ನಾಲೇಡ್ಜ್ ಹಬ್‌ನ ಆಡಳಿತ ನಿರ್ದೇಶಕ ಮಹಮ್ಮದ್ ಅಲಿ ವಿಟ್ಲ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

- Advertisement -

Related news

error: Content is protected !!