Wednesday, September 9, 2026
spot_imgspot_img
spot_imgspot_img

ಬೆಂಗಳೂರು: ಡಿಆರ್‌ಐ ಅಧಿಕಾರಿಗಳ ಕಾರ್ಯಾಚರಣೆ – 180 ನಕ್ಷತ್ರ ಆಮೆಗಳು ವಶಕ್ಕೆ

- Advertisement -
- Advertisement -

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡಿಆರ್‌ಐ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಗಾಂಧಿನಗರದಲ್ಲಿ 180 ನಕ್ಷತ್ರ ಆಮೆಗಳನ್ನು ವಶಪಡಿಸಿಕೊಂಡಿದ್ದಾರೆ.

ಟ್ರಾಲಿ ಬ್ಯಾಗ್‌ನಲ್ಲಿ ನಕ್ಷತ್ರ ಆಮೆಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಡಿಆರ್‌ಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹತ್ತು ಸಾವಿರಕ್ಕೆ ನಕ್ಷತ್ರ ಆಮೆಗಳನ್ನು ಮಾರಾಟ ಮಾಡಲು ಯತ್ನಿಸಿದ್ದು, ಪ್ರಕರಣ ಸಂಬಂಧ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಓರ್ವ ವ್ಯಕ್ತಿ ಕಲಾಸಿಪಾಳ್ಯದಿಂದ ನಕ್ಷತ್ರ ಆಮೆಗಳನ್ನು ತಂದುಕೊಟ್ಟಿದ್ದ. ಘಟನೆ ಸಂಬಂದ ಪ್ರಕರಣ ದಾಖಲಿಸಿದ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ನಕ್ಷತ್ರ ಆಮೆಗಳನ್ನು ಇಟ್ಟುಕೊಂಡರೆ ಅದೃಷ್ಟ ಬರುತ್ತದೆ ಎಂದು ಆರೋಪಿಗಳು ನಂಬಿಸುತ್ತಿದ್ದರು. ಮಾರಾಟಕ್ಕೆ ಯತ್ನಿಸಿದ ವೇಳೆ ಆಮೆಗಳನ್ನು ಜಪ್ತಿ ಮಾಡಿದ್ದು, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

- Advertisement -

Related news

error: Content is protected !!