Wednesday, September 9, 2026
spot_imgspot_img
spot_imgspot_img

ಪೊಲೀಸ್ ಸಿಬ್ಬಂದಿಯ ಆರೋಗ್ಯ ಸುಧಾರಣೆಗೆ ‘ಪ್ರಾಜೆಕ್ಟ್ ಖುಷಿ’ ಆರಂಭ

- Advertisement -
- Advertisement -

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಸಿಬ್ಬಂದಿಯ ಆರೋಗ್ಯ ಮತ್ತು ಯೋಗಕ್ಷೇಮ ಸುಧಾರಿಸುವ ಉದ್ದೇಶದಿಂದ ‘ಪ್ರಾಜೆಕ್ಟ್ ಖುಷಿ’ ಆರೋಗ್ಯ ಕಾರ್ಯಕ್ರಮವನ್ನು ಆರಂಭಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.ಬೆಂಗಳೂರು ನಗರ ಪೊಲೀಸ್, ಹ್ಯಾಪಿಯೆಸ್ಟ್ ಹೆಲ್ತ್, ಟೈಟಾನ್ ಕಂಪನಿ ಲಿಮಿಟೆಡ್ ಹಾಗೂ ಇಂದಿರಾನಗರ ರೋಟರಿ ಟ್ರಸ್ಟ್‌ಗಳ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಮೊದಲ ಹಂತದಲ್ಲಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ವಿಭಾಗದಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.ಒಟ್ಟು 600 ಪೊಲೀಸ್ ಸಿಬ್ಬಂದಿ ಈ ಯೋಜನೆಯ ಪ್ರಯೋಜನ ಪಡೆಯಲಿದ್ದು, ಪ್ರತಿ ಬ್ಯಾಚ್‌ಗೆ ಮೂರು ತಿಂಗಳ ಅವಧಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ಆರೋಗ್ಯ ತಪಾಸಣೆ, ತಜ್ಞರಿಂದ ಮಾರ್ಗದರ್ಶನ, ಡಿಜಿಟಲ್ ತೊಡಗಿಸಿಕೊಳ್ಳುವಿಕೆ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತದೆ.ಈ ಹಿಂದೆ ನಡೆದ ಪ್ರಾಯೋಗಿಕ ಕಾರ್ಯಕ್ರಮದಲ್ಲಿ ಉತ್ತಮ ಫಲಿತಾಂಶ ಕಂಡುಬಂದಿದೆ. ಭಾಗವಹಿಸಿದವರಲ್ಲಿ ಶೇ.61ರಷ್ಟು ಮಂದಿಯ ರಕ್ತದಲ್ಲಿನ ಸಕ್ಕರೆ ಪ್ರಮಾಣ ಇಳಿಕೆಯಾಗಿದ್ದು, ಶೇ.70ರಷ್ಟು ಮಂದಿಯ ವಿಟಮಿನ್ ಬಿ12 ಕೊರತೆ ಸುಧಾರಿಸಿದೆ. ಶೇ.59ರಷ್ಟು ಮಂದಿ ದೇಹದ ತೂಕವನ್ನು ಕಡಿಮೆ ಮಾಡಿಕೊಂಡಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ನಿರಂತರ ಕರ್ತವ್ಯದ ನಡುವೆಯೂ ಪೊಲೀಸ್ ಸಿಬ್ಬಂದಿ ಆರೋಗ್ಯಕರ ಜೀವನ ನಡೆಸಲು ‘ಪ್ರಾಜೆಕ್ಟ್ ಖುಷಿ’ ಸಹಕಾರಿಯಾಗಲಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಪೊಲೀಸರು ವೈದ್ಯರ ಸಲಹೆ-ಸೂಚನೆಗಳನ್ನು ದಿನನಿತ್ಯ ಪಾಲಿಸಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

- Advertisement -

Related news

error: Content is protected !!