Saturday, September 12, 2026
spot_imgspot_img
spot_imgspot_img

ಗಣೇಶೋತ್ಸವ ಹಿನ್ನೆಲೆ: ಉಡುಪಿಯಲ್ಲಿ 3 ದಿನ ಮದ್ಯ ಮಾರಾಟ ನಿಷೇಧ

- Advertisement -
- Advertisement -

ಉಡುಪಿ: ಗಣೇಶೋತ್ಸವವನ್ನು ಶಾಂತಿಯುತವಾಗಿ ಆಚರಿಸುವ ಹಾಗೂ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಕಾನೂನು ಪಾಲನೆ ಕಾಪಾಡುವ ಉದ್ದೇಶದಿಂದ ಉಡುಪಿ ಜಿಲ್ಲೆಯಲ್ಲಿ ಮೂರು ದಿನ ವಿವಿಧ ಅವಧಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ.

ಸೆ.14ರಂದು ಬೆಳಗ್ಗೆ 6ರಿಂದ ರಾತ್ರಿ 12ರವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ ಮದ್ಯ ಮಾರಾಟ ನಿಷೇಧ ಜಾರಿಯಲ್ಲಿರಲಿದೆ.

ಸೆ.16ರಂದು ಮಧ್ಯಾಹ್ನ 2ರಿಂದ ರಾತ್ರಿ 12ರವರೆಗೆ ಉಡುಪಿ ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ.ಸೆ.18ರಂದು ಮಧ್ಯಾಹ್ನ 2ರಿಂದ ರಾತ್ರಿ 12ರವರೆಗೆ ಗಣೇಶ ಮೂರ್ತಿ ವಿಸರ್ಜನೆ ನಡೆಯುವ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಗಂಗೊಳ್ಳಿ, ಕುಂದಾಪುರ ನಗರ ಹಾಗೂ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ದಿಷ್ಟ ಗ್ರಾಮಗಳಲ್ಲಿಯೂ ಈ ನಿಷೇಧ ಜಾರಿಯಲ್ಲಿರಲಿದೆ.

ಗಣೇಶೋತ್ಸವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ. ನಿಷೇಧಿತ ಅವಧಿಯಲ್ಲಿ ಮದ್ಯದಂಗಡಿಗಳು, ಬಾರ್‌ಗಳು ಹಾಗೂ ಮದ್ಯ ಮಾರಾಟ ಮಾಡುವ ಇತರ ಸಂಸ್ಥೆಗಳು ಮದ್ಯ ಮಾರಾಟ ಮಾಡದಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

- Advertisement -

Related news

error: Content is protected !!