Saturday, September 12, 2026
spot_imgspot_img
spot_imgspot_img

ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಬೆಳ್ತಂಗಡಿಯ ಉಷಾರಾಣಿ ನೇಮಕ

- Advertisement -
- Advertisement -

ಬೆಳ್ತಂಗಡಿ: ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದ ಉಷಾರಾಣಿ ಅವರನ್ನು ಕರ್ನಾಟಕ ಉಚ್ಚ ನ್ಯಾಯಾಲಯದ(ಹೈಕೋರ್ಟ್) ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

ಉಷಾರಾಣಿ ಅವರು ಬೆಳ್ತಂಗಡಿಯ ಪ್ರಸಿದ್ದ ಹಿರಿಯ ವಕೀಲರಾಗಿದ್ದ ದಿವಂಗತ ನೇಮಿರಾಜ ಶೆಟ್ಟಿ ಅವರ ಪುತ್ರಿಯಾಗಿದ್ದು, ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್.ಡಿ.ಎಂ.) ಕಾಲೇಜಿನ ಹಿರಿಯ ವಿದ್ಯಾರ್ಥಿನಿಯಾಗಿದ್ದಾರೆ.

ತಮ್ಮ ಸುದೀರ್ಘ ನ್ಯಾಯಾಂಗ ಸೇವೆಯಲ್ಲಿ ವಿವಿಧ ಹಂತಗಳಲ್ಲಿ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಿರುವ ಇವರು, ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ಸಲ್ಲಿಸಿದ ಶ್ರೇಷ್ಠ ಸೇವೆಯನ್ನು ಪರಿಗಣಿಸಿ ಇದೀಗ ಉನ್ನತ ನ್ಯಾಯಾಲಯದ ನ್ಯಾಯಮೂರ್ತಿ ಹುದ್ದೆಗೆ ಬಡ್ತಿ ನೀಡಲಾಗಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!