Saturday, September 12, 2026
spot_imgspot_img
spot_imgspot_img

ಬೆಳ್ತಂಗಡಿ: ಕಾರು – ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಢಿಕ್ಕಿ – ಹಲವರಿಗೆ ಗಾಯ

- Advertisement -
- Advertisement -

ಬೆಳ್ತಂಗಡಿ: ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿ ಹಲವರು ಗಾಯಗೊಂಡ ಘಟನೆ ಸೆ.12 ಶನಿವಾರ ಕೊಕ್ಕಡ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಧರ್ಮಸ್ಥಳದಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಕಾರು ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳ ಕ್ಕೆ ಬರುತ್ತಿದ್ದ ಬಸ್‌ ಮುಖಾಮುಖಿಯಾಗಿ ಢಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ಬಸ್ಸಿನ ಮುಂಭಾಗ ಮತ್ತು ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದೆ.

ಬಸ್ಸಿನಲ್ಲಿದ್ದ ಮೂವರು ಪ್ರಯಾಣಿಕರು ಹಾಗೂ ಕಾರಿನಲ್ಲಿದ್ದ ಹಲವರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!