Sunday, September 13, 2026
spot_imgspot_img
spot_imgspot_img

ಶಿವಮೊಗ್ಗ: ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

- Advertisement -
- Advertisement -

ಶಿವಮೊಗ್ಗ: ಹೊಸನಗರ ತಾಲೂಕಿನ ನೆವಟೂರು ಆನೆಕೆರೆ ಸಮೀಪ ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಅರಣ್ಯ ಸಂಚಾರಿ ದಳ ಯಶಸ್ವಿಯಾಗಿದೆ.

ಈ ಕೃತ್ಯದಲ್ಲಿ ಭಾಗಿಯಾಗಿದ್ದ ನೆವಟೂರು ಆನೆಕೆರೆ ನಿವಾಸಿಗಳಾದ ನಿಂಗಪ್ಪ ಹಾಗೂ ರಾಮಪ್ಪ ಎಂಬ ಇಬ್ಬರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ಪಿಎಸ್‌ಐ ವಿನಾಯಕ ಕೆ. ನೇತೃತ್ವದ ತಂಡ ದಾಳಿ ನಡೆಸಿದೆ. ಈ ವೇಳೆ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ 34.945 ಕೆ.ಜಿ ತೂಕದ ಜಿಂಕೆ ಮಾಂಸವನ್ನ ವಶಪಡಿಸಿಕೊಳ್ಳಲಾಗಿದೆ.

ಪಿಎಸ್‌ಐ ವಿನಾಯಕ ಕೆ. ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ. ಪೊಲೀಸ್ ಸಿಬ್ಬಂದಿ ಆಂಜನೇಯ ಪಾಟೀಲ್, ಬಿ.ಸಿ. ಗಣೇಶ, ಚಂದ್ರಕಾಂತ, ಮಹೇಶ, ಹೆಚ್.ಬಿ. ದೊಡ್ಡಮನಿ ಹಾಗೂ ಪ್ರಮೋದಿನಿ ದಾಳಿಯಲ್ಲಿ ಪಾಲ್ಗೊಂಡಿದ್ದರು ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!