Monday, September 14, 2026
spot_imgspot_img
spot_imgspot_img

ಟ್ರಂಪ್‌ಗೂ ಕರ್ನಾಟಕದ ಗ್ಯಾರಂಟಿ ಮಾದರಿ ಪ್ರೇರಣೆ: ಡಿಕೆಶಿ

- Advertisement -
- Advertisement -

ಬೆಂಗಳೂರು: ಚುನಾವಣೆ ಹತ್ತಿರ ಬರಲಿ ಅಶೋಕ್ ಹಾಗು ವಿಜಯೇಂದ್ರ ಅವರಿಗೆ ಯಾವ ಅಧಿಕಾರವೂ ಇರೋದಿಲ್ಲ. ಬೇರೆಯವರು (ಕುಮಾರಸ್ವಾಮಿ)ಪ್ಯಾರಾಚೂಟ್ ಮೂಲಕ ಇಳಿಯುತ್ತಾರೆ ಎಂದು ಸಿಎಂ ಡಿ ಕೆ ಶಿವಕುಮಾ‌ರ್ ಅವರು ವ್ಯಂಗ್ಯವಾಡಿದ್ದಾರೆ.”ಅಶೋಕ್, ವಿಜಯೇಂದ್ರ ಅವರ ಕತೆ ಏನಿದ್ದರೂ, ಬರೀ ಬುಟ್ಟಿ ಬೇವಿನ ಸೊಪ್ಪು, ನಂದೇ ಬೆಳಗು ಪೂಜಾರಿ ಅನ್ನೋ ತರಹ. ಕುಮಾರಸ್ವಾಮಿ ಇವರಿಬ್ಬರನ್ನು ಇಳಿಸಿ ನನಗೇನಾದರೂ ಸಿಗಬಹುದಾ ಅಂತಾ ನೋಡುತ್ತಿದ್ದಾರೆ. ಹೀಗಾಗಿ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಬಾಂಬ್‌ ಹಾಕುತ್ತೇನೆ ಎನ್ನುತ್ತಿದ್ದಾರೆ” ಎಂದೂ ಸಿಎಂ ಅವರು ಛೇಡಿಸಿದರು

.ಕೆಪಿಸಿಸಿ ಕಚೇರಿಯಲ್ಲಿ ರವಿವಾರ ಬಿಜೆಪಿ ಮಾಜಿ ಶಾಸಕ ನೆ.ಲ. ನರೇಂದ್ರಬಾಬು ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.”ಕುಮಾರಸ್ವಾಮಿ ಅವರಿಗೆ ಕೇಂದ್ರದಲ್ಲಿ ದೊಡ್ಡ ಮಂತ್ರಿ ಸ್ಥಾನ ಸಿಕ್ಕಿದೆ. ಅದರ ಮೂಲಕ ಕರ್ನಾಟಕದ 50 ಸಾವಿರ ಜನರಿಗೆ ಉದ್ಯೋಗ ಸಿಗುವಂತೆ ಮಾಡಲಿ. ಅವರಿಗೆ ಎಲ್ಲಿ ಬೇಕೋ ಅಲ್ಲಿ ಮಂಡ್ಯದಲ್ಲೇ ಬೇಕಾದರೂ ಭೂಸ್ವಾಧೀನ ಮಾಡಿ ಕೊಡೋಣ. ಆದರೆ ಅವರು ನನ್ನನ್ನು ಅಧಿಕಾರದಿಂದ ಇಳಿಸಿ ಬಿತ್ತೇನೆ, ದೆಹಲಿಯಿಂದ ಬಾಂಬ್ ಹಾಕಿ ಬಿಡ್ತನೆ, ಅಲ್ಲೋಲ ಕಲ್ಲೋಲ ಮಾಡಿ ಬಿತ್ತೇನೆ ಅಂತ ಮಾತಾಡುತ್ತಿದ್ದಾರೆ” ಎಂದು ತಿರುಗೇಟು ನೀಡಿದರು.ಗ್ಯಾರಂಟಿ ಯೋಜನೆಗಳನ್ನು ಟ್ರಂಪ್ ನಕಲು ಮಾಡುತ್ತಿದ್ದಾರೆ:”ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಸಾಧ್ಯವಿಲ್ಲ ಎಂದು ವಿರೋಧ ಪಕ್ಷಗಳು ಟೀಕೆ ಮಾಡಿದವು. ಆದರೆ ಇಂದು ನಾವು ಗ್ಯಾರಂಟಿಗಳಿಂದಲೇ ದೇಶಕ್ಕೆ ಮಾದರಿಯಾಗಿದ್ದೇವೆ. ಬಿಹಾರ, ಮಧ್ಯಪ್ರದೇಶ, ಉತ್ತರ ಪ್ರದೇಶ ಹೀಗೆ ಎಲ್ಲಾ ಕಡೆ ಕರ್ನಾಟಕ ಮಾದರಿ ನಕಲು ಮಾಡಿದರು. ಈಗ ಅಮೇರಿಕಾದ ಟ್ರಂಪ್ ಕೂಡ ನಕಲು ಮಾಡುತ್ತಿದ್ದಾರೆ. ನನಗೆ ಮತ ಹಾಕಿ, ಡಾಲ‌ರ್ ನೀಡುತ್ತೇನೆ ಎಂದು ಹೇಳುತ್ತಿದ್ದಾರೆ. ನಮ್ಮ ಆಲೋಚನೆ ಇಡೀ ವಿಶ್ವಕ್ಕೆ ಪರಿಚಯವಾಗುತ್ತಿದೆ” ಎಂದರು.ಬೆಂಗಳೂರಿನಲ್ಲಿ 529 ಬಾಲ ಕಾರ್ಮಿಕರ ರಕ್ಷಣೆ, 105 ಪ್ರಕರಣ ದಾಖಲುಗ್ಯಾರಂಟಿ ಯೋಜನೆಗಳನ್ನು ಎಲ್ಲಾ ಪಕ್ಷ, ಜಾತಿಗಳಿಗೂ ನೀಡುತ್ತಿದ್ದೇವೆ. 4.44 ಕೋಟಿ ಜನರಿಗೆ ಅನ್ನಭಾಗ್ಯ ನೀಡುತ್ತಿದ್ದೇವೆ.

ಅದಕ್ಕೆ ಕಾಂಗ್ರೆಸ್‌ ಶಕ್ತಿಯೇ ದೇಶದ ಶಕ್ತಿ, ಇತಿಹಾಸ” ಎಂದರು.”ಅಸ್ಸಾಂ ರಾಜ್ಯದಲ್ಲಿ ಕೆಲವರಿಗೆ ಮಾತ್ರ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದ್ದಾರೆ. ಎಸ್ ಸಿಪಿ, ಟಿಎಸ್ ಪಿ ಜಾರಿಗೆ ತಂದಿದ್ದು ಕಾಂಗ್ರೆಸ್ ಪಕ್ಷ. ವಿದ್ಯಾರ್ಥಿಗಳಿಗೆ ಬಸ್ ಪಾಸ್ ಉಚಿತವಾಗಿ ನೀಡಲಾಗುತ್ತಿದೆ. ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿಸಿದ್ದೇವೆ. ಪ್ರಜಾಸೇವೆ ಮಾಡುತ್ತಿದ್ದೇವೆ. ಇದನ್ನು ಶಾಸಕರು ಹೇಗೆ ಬಳಸಿಕೊಳ್ಳುತ್ತಾರೋ ತಿಳಿದಿಲ್ಲ. ನಾನಂತೂ ಆದಷ್ಟು ಯಶಸ್ವಿಗೊಳಿಸುವೆ” ಎಂದರು.

- Advertisement -

Related news

error: Content is protected !!