Monday, September 14, 2026
spot_imgspot_img
spot_imgspot_img

ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ

- Advertisement -
- Advertisement -

ವಿಟ್ಲ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ ಪುತ್ತೂರು–ವಿಟ್ಲ ಘಟಕ, ರೋಟರಿ ಕ್ಲಬ್ ಪುತ್ತೂರು ಈಸ್ಟ್, ಸಮರ್ಪಣ್ ವಿಟ್ಲ ಹಾಗೂ ರೋಟರಿ ಕ್ಲಬ್ ವಿಟ್ಲ ಇವರ ಆಶ್ರಯದಲ್ಲಿ ವಿವಿಧ ಸಂಸ್ಥೆಗಳ ಸಹಭಾಗಿತ್ವದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ ವಿಟ್ಲದ ವಿಠ್ಠಲ ಪದವಿ ಪೂರ್ವ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ನಡೆಯಿತು.

ಶಿಬಿರವನ್ನು ವಿಟ್ಲ ಗ್ರಾಮೀಣ ಸಹಕಾರಿ ಸಂಘದ ಅಧ್ಯಕ್ಷ ಜಗನ್ನಾಥ ಸಾಲಿಯಾನ್ ಉದ್ಘಾಟಿಸಿದರು. ಪುತ್ತಿಲ ಪರಿವಾರದ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಅಧ್ಯಕ್ಷತೆ ವಹಿಸಿದ್ದರು.

ಶ್ರೀ ಸತ್ಯಸಾಯಿ ಸೇವಾ ಸಮಿತಿ ಈಶ್ವರಾಂಭ ಟ್ರಸ್ಟ್‌, ನಿಟ್ಟೆ ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ಏನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ಪುತ್ತೂರು ಸಹಭಾಗಿತ್ವದಲ್ಲಿ ಶಿಬಿರ ಆಯೋಜಿಸಲಾಗಿತ್ತು.
ಮುಖ್ಯ ಅತಿಥಿಗಳಾಗಿ ಕೃಷ್ಣಯ್ಯ ಕೆ. ವಿಟ್ಲ ಅರಮನೆ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ ಪುತ್ತೂರು ಅಧ್ಯಕ್ಷ ಶ್ರೀರಾಮ ಭಟ್ ಪಾತಾಳ, ಪುತ್ತೂರು ರೋಟರಿ ಕ್ಲಬ್ ಈಸ್ಟ್ ಅಧ್ಯಕ್ಷ ರವಿಕುಮಾರ್ ರೈ ಮಠ, ರೋಟರಿ ಕ್ಲಬ್ ವಿಟ್ಲ ಅಧ್ಯಕ್ಷ ಕ್ಯಾಪ್ಟನ್ ದಾಸಪ್ಪ ಪೂಜಾರಿ, ಸಮರ್ಪಣ್ ವಿಟ್ಲ ಅಧ್ಯಕ್ಷ ಯಶವಂತ ಪೂಜಾರಿ ನಿಡ್ಯ, ಪ್ರಭಾಕರ ಶೆಟ್ಟಿ ದಂಬೆಕಾನ, ಭಾಸ್ಕರ್ ರೈ, ಶ್ರೀಕೃಷ್ಣ ಕೇಪು, ಸುಬ್ರಹ್ಮಣ್ಯ ಭಟ್ ಸೇರಾಜೆ, ಸತ್ಯಸಾಯಿ ಸೇವಾ ಸಮಿತಿ ಸಂಚಾಲಕ ಬಿ. ದಯಾನಂದ ರೈ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಅರುಣ್ ಕುಮಾರ್ ಪುತ್ತಿಲ ಅವರನ್ನು ಸನ್ಮಾನಿಸಲಾಯಿತು.

ವಿಠ್ಠಲ ಪದವಿ ಪೂರ್ವ ಕಾಲೇಜಿಗೆ ಸಿಇಟಿ ಮತ್ತು ನೀಟ್ ಪರೀಕ್ಷೆಯ ತಯಾರಿ ಪುಸ್ತಕಗಳನ್ನು ವಿತರಿಸಲಾಯಿತು.
ಪುತ್ತಿಲ ಪರಿವಾರ ವಿಟ್ಲ ಘಟಕದ ಅಧ್ಯಕ್ಷ ಮೋಹನ್ ಸೇರಾಜೆ ಸ್ವಾಗತಿಸಿದರು. ಮಂಜುನಾಥ ಕಾಮತ್ ಪ್ರಸ್ತಾವಿಸಿದರು. ಶ್ರೀವಿಭಾ ಕೇಪು ವಂದೇ ಮಾತರಂ ಹಾಡಿದರು.

ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ ಪುತ್ತೂರು ಕಾರ್ಯಕಾರಿ ಸಮಿತಿ ಸದಸ್ಯ ರವಿಶಂಕರ್ ವಿಟ್ಲ ವಂದಿಸಿದರು. ಹರೀಶ್ ಕೆ. ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

- Advertisement -

Related news

error: Content is protected !!