Tuesday, September 15, 2026
spot_imgspot_img
spot_imgspot_img

ಬೆಳ್ತಂಗಡಿ : ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು ; ಮೂವರಿಗೆ ಗಾಯ

- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ನಾಲ್ಕು ಮಂದಿ ಕುಟುಂಬ ಸದಸ್ಯರಿದ್ದ ಕಾರು ನೇತ್ರಾವತಿಯ ಸರ್ವಿಸ್ ಸ್ಟೇಷನ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.

ಕೋಲಾರ ಜಿಲ್ಲೆಯ ನಾಲ್ಕು ಕುಟುಂಬ ಸದಸ್ಯರಿಂದ ಟೊಯೋಟಾ ಈಟಿಯಾಸ್ ಕಾರು ಧರ್ಮಸ್ಥಳ ದೇವಸ್ಥಾನಕ್ಕೆ ಹೋಗಿ ಬಳಿಕ ಉಜಿರೆ ಕಡೆ ಪ್ರಯಾಣ ಮಾಡುವಾಗ ಸೆ.14 ರಂದು ರಾತ್ರಿ 9:30 ಗಂಟೆಗೆ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನ ಘಟ್ಟದ ಬಳಿಯ ಸರ್ವಿಸ್ ಸ್ಟೇಷನ್ ಪಕ್ಕದ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಈ ವೇಳೆ ಕಾರು ಚಾಲಕ ಶಶಿಕುಮಾರ್ ಸಹಿತ ಮೂರು ಜನರಿಗೆ ಕಾಲು ಮತ್ತು ಕೈಗೆ ಗಾಯವಾಗಿದ್ದು, ತಕ್ಷಣ ಮೂವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಿಂದ ತಿಳಿದುಬಂದಿದೆ.

- Advertisement -

Related news

error: Content is protected !!