Wednesday, September 16, 2026
spot_imgspot_img
spot_imgspot_img

ರೇಣುಕಾಸ್ವಾಮಿ ಕೊಲೆ ಪ್ರಕರಣ – ಮಾಫಿ ಸಾಕ್ಷಿ ಪ್ರದೋಷ್‌ ವಿರುದ್ಧ ದೂರು ದಾಖಲು

- Advertisement -
- Advertisement -

ಆನೇಕಲ್: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮಾಫಿ ಸಾಕ್ಷಿಯಾಗಿರುವ ಪ್ರದೋಷ್​ ಜೈಲಿನ ನಿಯಮಗಳನ್ನು ಉಲ್ಲಂಘಿಸಿ ಪತ್ನಿಯೊಂದಿಗೆ ಮಾತನಾಡಲು ಜೈಲು ಸಿಬ್ಬಂದಿ ಸಹಾಯ ಪಡೆದಿರುವ ಆರೋಪದಡಿ ಆತನ ವಿರುದ್ಧ ದೂರು ದಾಖಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿಗಳಿಗೆ ವಕೀಲರ ಜೊತೆ ಹಾಗೂ ಕುಟುಂಬದವರ ಜೊತೆ ಮಾತನಾಡುವುದಕ್ಕೆ 3 ನಂಬರ್‌ಗಳನ್ನು ಕೊಡಲಾಗುತ್ತದೆ. ವಕೀಲರ ಜೊತೆ ಹಾಗೂ ಕುಟುಂಬದವರ ಜೊತೆ ಮಾತನಾಡಲು ಅವಕಾಶ ಕೊಡುವ ನಂಬರ್ ಅನ್ನು ರಿಜಿಸ್ಟರ್ ಮಾಡಿಸಿಕೊಂಡಿರುತ್ತಾರೆ. ಈ ನಂಬರ್‌ಗಳನ್ನ ನಮೂದು ಮಾಡಿಸಿಕೊಳ್ಳುವ ಜವಾಬ್ದಾರಿಯನ್ನು ಮೌನೇಶ್.ಹೆಚ್.ಕೋರಿ ಎಂಬ ಸಿಬ್ಬಂದಿಗೆ ವಹಿಸಲಾಗಿತ್ತು.

ಆರೋಪಿ ಪ್ರದೋಷ್ ಬೇರೆ ಖೈದಿ ಹೆಸರಿನಲ್ಲಿ ನಂಬರ್ ಪಡೆದು, ಈ ನಂಬರ್ ನೋಂದಾಯಿಸಿಕೊಳ್ಳಲು ಜೈಲು ಸಿಬ್ಬಂದಿ ಮೌನೇಶ್ ಸಹಾಯ ಮಾಡಿದ್ದನು. ಅಲ್ಲದೇ ವಕೀಲರ ನಂಬರ್ ಎಂದು ನಮೂದಿಸಿ ಪತ್ನಿಯ ಜೊತೆ ಮಾತನಾಡುತ್ತಿರುವುದು ಇದೀಗ ಬೆಳಕಿಗೆ ಬಂದಿದೆ. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮೌನೇಶ್ ಹಾಗೂ ಪ್ರದೋಷ್ ವಿರುದ್ಧ ದೂರು ದಾಖಲಾಗಿರುವುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!