Saturday, September 19, 2026
spot_imgspot_img
spot_imgspot_img

ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ: ಧಕ್ಕೆ ಬಂದ್ ಮಾಡಿಸಿದವರ ಅಮಾನತಿಗೆ ಸೂಚನೆ

- Advertisement -
- Advertisement -

ಮಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ(ಸೆ.19) ಬೆಳ್ಳಂಬೆಳಗ್ಗೆ ಮಂಗಳೂರು ಮೀನುಗಾರಿಕೆ ಬಂದರು ಬಳಿಯ ಧಕ್ಕೆ ಪ್ರದೇಶಕ್ಕೆ ದಿಢೀರ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯುಟಿ ಖಾದರ್ ಅವರು ಮುಖ್ಯಮಂತ್ರಿಗಳಿಗೆ ಸಾಥ್ ನೀಡಿದರು.

ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಸಿಎಂ ಡಿಕೆ ಶಿವಕುಮಾರ್ ಧಕ್ಕೆ ಪ್ರದೇಶವನ್ನು ಕಾಲ್ನಡಿಗೆಯಲ್ಲಿ ಸುತ್ತಿ ವೀಕ್ಷಿಸಿದರು. ಸಮುದ್ರದಿಂದ ಬಂದ ತಾಜಾ ಮೀನುಗಳನ್ನು ಪರಿಶೀಲಿಸಿದ ಸಿಎಂ ಮೀನುಗಾರಿಕೆ ಬೋಟ್‌ಗಳನ್ನೂ ವೀಕ್ಷಿಸಿದರು. ಈ ವೇಳೆ ಅಲ್ಲಿದ್ದ ಮೀನುಗಾರರು ಮುಖ್ಯಮಂತ್ರಿಗಳಿಗೆ ಜೈಕಾರ ಕೂಗಿದರು. ಸಿಎಂ ಅವರು ಮೀನುಗಾರರೊಂದಿಗೆ ಕೆಲಕಾಲ ಮಾತುಕತೆ ನಡೆಸಿ, ಅವರ ಸಮಸ್ಯೆಗಳನ್ನು ಆಲಿಸಿದರು.

ಶುಕ್ರವಾರ ಸಚಿವ ಸಂಪುಟ ಸಭೆಯಲ್ಲಿ ಮೀನುಗಾರಿಕಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವಾರು ಯೋಜನೆಗಳ ಕುರಿತು ಚರ್ಚೆ ನಡೆದಿರುವುದೂ ಗಮನಾರ್ಹ. ಮೀನುಗಾರಿಕಾ ಇಲಾಖಾ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಅಧಿಕಾರಿಗಳು ಮುಂದಿನ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಮೀನುಗಾರಿಕೆ ಧಕ್ಕೆಯಲ್ಲಿ ವ್ಯಾಪಾರ ವಹಿವಾಟು ಬಂದ್ ಆಗಿರುವುದನ್ನು ಗಮನಿಸಿದ ಸಿಎಂ ಆ ಬಗ್ಗೆ ಪ್ರಶ್ನಿಸಿದರು. ಅಲ್ಲದೆ, ಧಕ್ಕೆ ಬಂದ್ ಮಾಡಿಸಿದ ಅಧಿಕಾರಿಗಳ ಅಮಾನತಿಗೆ ಸೂಚನೆ ನೀಡಿದರು ಎಂದು ತಿಳಿದುಬಂದಿದೆ.

- Advertisement -

Related news

error: Content is protected !!