- Advertisement -
- Advertisement -




ಪುತ್ತೂರು: ರಾಜ್ಯಾದ್ಯಂತ ಸುದ್ದಿಯಾಗಿದ್ದ ಪುತ್ತೂರಿನ ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ನಾಮಿನೇಷನ್‌ಗೆ ನೀಡಿದ್ದ ಜನನ ಪ್ರಮಾಣ ಪತ್ರವೊಂದಕ್ಕೆ ಹಾನಿಯಾದ ಘಟನೆಗೆ ಸಂಬಂಧಿಸಿ ಅಂಗಡಿ ಮಾಲೀಕರು ಹಾಗೂ ಗ್ರಾಹಕರ ನಡುವೆ ಗಲಾಟೆ ನಡೆದಿತ್ತು. ಈ ಸಂದರ್ಭ ನೂರಾರು ಮಂದಿ ಸ್ಥಳದಲ್ಲಿ ಸೇರಿದ್ದರು. ಅಂಗಡಿ ಮಾಲೀಕ ಅಂಜನ ಎಸ್. ಪೈ ಅವರಿಗೆ ಹಲ್ಲೆ ನಡೆಸಿ ಬೆದರಿಕೆ ಒಡ್ಡಿದ ಆರೋಪದಡಿ ಪೊಲೀಸರು ಚಿಕ್ಕಮಡೂರು ತಾರಿಗುಡ್ಡೆ ನಿವಾಸಿ ಮಹಮ್ಮದ್ ನೌಷದ್ (32) ಹಾಗೂ ಪರ್ಣೆ ನಿವಾಸಿ ಅಬ್ದುಲ್ ನಿಯಾಜ್ (26) ವಿರುದ್ಧ ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣದಲ್ಲಿ ಆರೋಪಿಗಳು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಇಬ್ಬರಿಗೂ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
- Advertisement -








