Saturday, September 19, 2026
spot_imgspot_img
spot_imgspot_img

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತ್ಯು

- Advertisement -
- Advertisement -

ರಾಯಚೂರು: ನಗರದ ಜಹಿರಾಬಾದ್‌ನ ಎಂ.ಈರಣ್ಣ ವೃತ್ತದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವನ್ನಪ್ಪಿದ್ದು, ಓರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ.

ಸುಚಿತ್(14), ಚರಣಕುಮಾರ್16 ಮೃತ ದುರ್ದೈವಿಗಳು. ವಿಜಯಕುಮಾರ್‌(36)ಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟ್ರ್ಯಾಕ್ಟರ್ ಚಾಲಕ ಬ್ರೇಕ್ ಬದಲು ಆಕ್ಸಿಲರೇಟರ್‌ ಒತ್ತಿದ ಹಿನ್ನೆಲೆ ದುರಂತ ನಡೆದಿದ್ದು, ಜಹಿರಾಬಾದ್ ನಿಂದ ನಗರದ ಖಾಸಬಾವಿಗೆ ಗಣೇಶ ವಿಸರ್ಜನೆ ಮೆರವಣಿಗೆ ಹೊರಟಿದ್ದ ವೇಳೆ ಘಟನೆ ನಡೆದಿದೆ.

ಇಬ್ಬರು ಬಾಲಕರು ಸಾವನ್ನಪ್ಪಿದರೆ, ಓರ್ವನ ಸ್ಥಿತಿ ಗಂಭೀರವಾಗಿದೆ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಾಯಚೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!