Saturday, September 19, 2026
spot_imgspot_img
spot_imgspot_img

ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ, ₹80 ಸಾವಿರ ದಂಡ

- Advertisement -
- Advertisement -

ಬಂಟ್ವಾಳ: ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪೋಕ್ಸೋ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹80 ಸಾವಿರ ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ.ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ 2025ರಲ್ಲಿ ದಾಖಲಾಗಿದ್ದ ಅ.ಕ್ರ. 141/2025ರ ಪ್ರಕರಣದಲ್ಲಿ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ನಿವಾಸಿ ಅಬ್ದುಲ್ ಲತಿಫ್ ಹಾಗೂ ಇತರ ಇಬ್ಬರ ವಿರುದ್ಧ ಪೋಕ್ಸೋ ಕಾಯ್ದೆ ಮತ್ತು ಬಿಎನ್‌ಎಸ್‌ನ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆಯನ್ನು ಬಂಟ್ವಾಳ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಅವರು ನಡೆಸಿ, ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ ಆರೋಪಿತರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-2)ದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, ಅಬ್ದುಲ್ ಲತಿಫ್ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಸೆ.19ರಂದು ನ್ಯಾಯಾಧೀಶ ಮಾನು ಕೆ.ಎಸ್. ಅವರು ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹80 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.ಸರ್ಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ಅವರು ಸರ್ಕಾರದ ಪರವಾಗಿ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿದ್ದರು.

- Advertisement -

Related news

error: Content is protected !!