Sunday, September 20, 2026
spot_imgspot_img
spot_imgspot_img

ವೈವಾಹಿಕ ಕಲಹ: ಇಬ್ಬರು ಮಕ್ಕಳನ್ನು ಬಾವಿಗೆ ಎಸೆದು ಕೊಲೆ ಆರೋಪ- ಆರೋಪಿತೆಗೆ 14 ದಿನ ನ್ಯಾಯಾಂಗ ಬಂಧನ

- Advertisement -
- Advertisement -


ಉಪ್ಪಿನಂಗಡಿ: ವೈವಾಹಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ತನ್ನ ಸುಮಾರು ಮೂರುವರೆ ವರ್ಷದ ಮಗು ಹಾಗೂ ಗಂಡನ ತಂಗಿಯ ಸುಮಾರು ಮೂರು ವರ್ಷದ ಮಗುವನ್ನು ಮನೆಯ ಸಮೀಪದ ಬಾವಿಗೆ ಎಸೆದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪೆರ್ನೆಯಲ್ಲಿ ಸೆ.19ರಂದು ನಡೆದಿತ್ತು.

ಘಟನೆಯಲ್ಲಿ ಒಂದು ಮಗು ಮೃತಪಟ್ಟಿದ್ದು, ಮತ್ತೊಂದು ಮಗುವಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.


ಪೆರ್ನೆ ನಿವಾಸಿಗಳಾದ ಸಿನಾನ್ (32) ಹಾಗೂ ನೂರುನ್ನಿಸಾ (28) ದಂಪತಿ ನಡುವೆ ಸೆ.19ರಂದು ಮಧ್ಯಾಹ್ನ ಫೋನ್ ಕರೆಯಲ್ಲಿ ವೈವಾಹಿಕ ಕಲಹ ನಡೆದಿತ್ತು ಎನ್ನಲಾಗಿದೆ. ಈ ವೇಳೆ ಕೋಪಗೊಂಡ ನೂರುನ್ನಿಸಾ ಮನೆಯಲ್ಲಿದ್ದ ತನ್ನ ಸುಮಾರು ಮೂರುವರೆ ವರ್ಷದ ಮಗು ಹಾಗೂ ಗಂಡನ ತಂಗಿಯ ಸುಮಾರು ಮೂರು ವರ್ಷದ ಮಗುವನ್ನು ಮನೆಯ ಸಮೀಪದ ಬಾವಿಗೆ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ.


ಘಟನೆ ಗಮನಿಸಿದ ಸ್ಥಳೀಯರು ತಕ್ಷಣ ಸ್ಥಳಕ್ಕೆ ಆಗಮಿಸಿ ಮಕ್ಕಳನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಈ ಪೈಕಿ ನೂರುನ್ನಿಸಾ ಅವರ ಗಂಡನ ತಂಗಿಯ ಮಗು ಮೃತಪಟ್ಟಿದ್ದು, ನೂರುನ್ನಿಸಾ ಅವರ ಮಗುವನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 121/2026ರಂತೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿತೆ ನೂರುನ್ನಿಸಾರನ್ನು ಪೊಲೀಸರು ದಸ್ತಗಿರಿ ಮಾಡಿ ಸೆ.20ರಂದು ಮಾನ್ಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿತೆಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

- Advertisement -

Related news

error: Content is protected !!