Tuesday, September 22, 2026
spot_imgspot_img
spot_imgspot_img

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ – ದಂಪತಿ ಸ್ಥಳದಲ್ಲೇ ಸಾವು

- Advertisement -
- Advertisement -

ಧಾರವಾಡ: ತಡರಾತ್ರಿ ಹುಬ್ಬಳ್ಳಿ–ಗದಗ ಬೈಪಾಸ್‌ನಲ್ಲಿ ಕೊರಿಯರ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.

ಮೃತರನ್ನು ಜಯರಾಜನಗರ ನಿವಾಸಿಗಳಾದ ರಜನಿ ತಿಕಲಾ ಹಾಗೂ ಸುಕುಮಾರ ತಿಕಲಾ ಎಂದು ಗುರುತಿಸಲಾಗಿದೆ. ರಜನಿ ತಿಕಲಾ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ನಿನ್ನೆ ರಾತ್ರಿ ವೇಳೆ ಕೆಲಸ ಮುಗಿಸಿಕೊಂಡು ರಜನಿಯನ್ನು ಪತಿ ಸುಕುಮಾರ ಬೈಕ್‌ನಲ್ಲಿ ಮನೆಗೆ ಕರೆದೊಯ್ಯುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಎದುರಿನಿಂದ ಬಂದ ಕೊರಿಯರ್ ಗೂಡ್ಸ್ ವಾಹನ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ದಂಪತಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಪೂರ್ವ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ, ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತದ ನಿಖರ ಕಾರಣದ ಕುರಿತು ತನಿಖೆ ನಡೆದಿದ್ದು, ಕೊರಿಯರ್ ವಾಹನ ಹಾಗೂ ಚಾಲಕನ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಘಟನೆ ಕುರಿತು ಪೂರ್ವ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!