Wednesday, September 23, 2026
spot_imgspot_img
spot_imgspot_img

ಮಂಗಳೂರು: ನಿಯಂತ್ರಣ ತಪ್ಪಿ ಹೈವೋಲ್ಟೇಜ್ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಇಬ್ಬರು ಪವಾಡಸದೃಶವಾಗಿ ಪಾರು

- Advertisement -
- Advertisement -

ಮಂಗಳೂರು: ಅತಿ ವೇಗದಿಂದ ಬಂದ ಕಾರು ನಿಯಂತ್ರಣ ತಪ್ಪಿ ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಮಂಗಳೂರಿನ ಮರೋಳಿ ಎಂಬಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ-73ರಲ್ಲಿ ಅಪಘಾತ ಸಂಭವಿಸಿದ್ದು, ಕಾರು ಚಾಲಕ ಹಾಗೂ ಸಹ ಪ್ರಯಾಣಿಕ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಡೀಲ್‌ ಕಡೆಯಿಂದ ಅತಿ ವೇಗವಾಗಿ ಬಂದ ಕಾರು, ರಸ್ತೆ ಅಂಚಿನಲ್ಲಿದ್ದ ಹೈವೋಲ್ಟೇಜ್‌ ಕಂಬಕ್ಕೆ ಡಿಕ್ಕಿ ಹೊಡೆದು ಡಿಕ್ಕಿ ರಭಸಕ್ಕೆ ಕಾರು ಜಖಂಗೊಂಡಿದೆ. ವಿದ್ಯುತ್‌ ಕಂಬ ಮುರಿದು ಕಾರಿನ ಮೇಲೆ ಬಿದ್ದಿದ್ದು, ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿರುವುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!