Wednesday, September 23, 2026
spot_imgspot_img
spot_imgspot_img

ಏಷ್ಯನ್ ಗೇಮ್ಸ್‌ನಲ್ಲಿ ಬೆಳ್ಳಿ ಗೆದ್ದ ಮೀರಾಬಾಯಿ ಚಾನು

- Advertisement -
- Advertisement -

ಟೊಕಿಯೊ: ಭಾರತದ ಸ್ಟಾರ್ ವೇಟ್‌ಲಿಫ್ಟರ್ ಮೀರಾಬಾಯಿ ಚಾನು  ಕೊನೆಗೂ ಏಷ್ಯನ್ ಗೇಮ್ಸ್‌ ಪದಕದ ಬರ ನೀಗಿಸಿಕೊಂಡಿದ್ದಾರೆ.

2026ರ ಆವೃತ್ತಿಯ ಏಷ್ಯನ್‌ ಗೇಮ್ಸ್‌ನಲ್ಲಿ  ಬುಧವಾರ ನಡೆದ ಮಹಿಳೆಯರ 49 ಕೆ.ಜಿ. ವಿಭಾಗದಲ್ಲಿ ಚಾನು ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ. ಇದು ಏಷ್ಯನ್ ಗೇಮ್ಸ್‌ನಲ್ಲಿ ಮೀರಾಬಾಯಿ ಚಾನು ಅವರ ಚೊಚ್ಚಲ ಪದಕವಾಗಿದೆ.

ಸ್ನ್ಯಾಚ್‌ನಲ್ಲಿ 87 ಕೆ.ಜಿ., ಕ್ಲೀನ್ ಆ್ಯಂಡ್ ಜೆರ್ಕ್‌ನಲ್ಲಿ 111 ಕೆ.ಜಿ ಒಟ್ಟು 198 ಕೆಜಿ ಭಾರ ಎತ್ತುವ ಮೂಲಕ ಚಾನು ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು. ಒಟ್ಟು 215 ಕೆಜಿ ಭಾರ ಎತ್ತಿದ ಉತ್ತರ ಕೊರಿಯಾದ ರಿ ಸಾಂಗ್-ಗಮ್ ಸತತ 3ನೇ ಬಾರಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ರೆ, ಇಂಡೋನೇಷ್ಯಾದ ಲುಲುಕ್ ಡಯಾನಾ ಟ್ರಿ ವಿಜಯಾನಾ 191 ಕೆ.ಜಿ. ಒಟ್ಟು ಭಾರ ಎತ್ತಿ ಕಂಚಿನ ಪದಕ ಗೆದ್ದರು.

ಒಲಿಂಪಿಕ್ಸ್, ಏಷ್ಯನ್ ಗೇಮ್ಸ್, ಕಾಮನ್‌ವೆಲ್ತ್ ಗೇಮ್ಸ್, ವಿಶ್ವ ಚಾಂಪಿಯನ್‌ಶಿಪ್, ಏಷ್ಯನ್ ಹಾಗೂ ಕಾಮನ್‌ವೆಲ್ತ್ ಚಾಂಪಿಯನ್‌ಶಿಪ್‌ ಸೇರಿದಂತೆ ಪ್ರಮುಖ ಅಂತಾರಾಷ್ಟ್ರೀಯ ವೇಟ್‌ಲಿಫ್ಟಿಂಗ್ ಕೂಟಗಳಲ್ಲಿ ಪದಕ ಗೆದ್ದ 2ನೇ ಭಾರತೀಯ ವೇಟ್‌ಲಿಫ್ಟರ್ ಎಂಬ ಹೆಗ್ಗಳಿಕೆಗೂ ಚಾನು ಪಾತ್ರರಾಗಿದ್ದಾರೆ.

ಈ ಬೆಳ್ಳಿ ಪದಕದ ಗೆಲುವಿನೊಂದಿಗೆ ಏಷ್ಯನ್‌ ಗೇಮ್ಸ್‌ನ ಪದಕ ಪಟ್ಟಿಯಲ್ಲಿ ಭಾರತ 8ನೇ ಸ್ಥಾನಕ್ಕೆ ಜಿಗಿದಿದೆ. 1 ಚಿನ್ನ, ತಲಾ 4 ಬೆಳ್ಳಿ ಹಾಗೂ 4 ಕಂಚಿನೊಂದಿಗೆ 9 ಪದಕಗಳನ್ನ ಭಾರತ ಗೆದ್ದುಕೊಂಡಿದೆ.

- Advertisement -

Related news

error: Content is protected !!