Wednesday, September 23, 2026
spot_imgspot_img
spot_imgspot_img

ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್‌ಐಆ‌ರ್

- Advertisement -
- Advertisement -

ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆ‌ರ್ ದಾಖಲಾಗಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ಅವರಿಗೆ ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಪ್ರಕರಣ ದಾಖಲಾಗಿದೆ.ಟಿ. ನರಸೀಪುರ ತಾಲೂಕಿನ ಕೈಯಂಬಳ್ಳಿ ಗ್ರಾಮದ ಡಾ. ಬಿ.ಆ‌ರ್. ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಧು ಕೆ.ಟಿ. ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಇತ್ತೀಚೆಗೆ ಟಿ. ನರಸೀಪುರದಲ್ಲಿ ಗಣೇಶೋತ್ಸವದ ಶೋಭಾಯಾತ್ರೆ ಸಂದರ್ಭದಲ್ಲಿ ಪೊಲೀಸ್ ಇನ್ಸ್‌ಪೆಕ್ಟ‌ರ್ ಧನಂಜಯ್‌ ಅವರೊಂದಿಗೆ ಉಂಟಾದ ವಿವಾದದ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ಈಗಾಗಲೇ ಎಫ್‌ಐಆ‌ರ್ ದಾಖಲಾಗಿತ್ತು. ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಿಸಲಾಗಿತ್ತು.ಇದೀಗ ಇನ್ಸ್‌ಪೆಕ್ಟ‌ರ್ ಧನಂಜಯ್ ಅವರ ಜಾತಿಯನ್ನು ಉಲ್ಲೇಖಿಸಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಮಧು ಅವರು ತಮ್ಮದೂರಿನಲ್ಲಿ ಆರೋಪಿಸಿದ್ದಾರೆ.

ಈ ದೂರಿನ ಆಧಾರದ ಮೇಲೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಸೇರಿದಂತೆ ಭಾರತೀಯ ನ್ಯಾಯ ಸಂಹಿತೆಯ ಕೆಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ದೂರಿನಲ್ಲಿ ಮಾಡಿರುವ ಆರೋಪಗಳು ತನಿಖೆಯ ಹಂತದಲ್ಲಿದ್ದು ಅವುಗಳ ಸತ್ಯಾಸತ್ಯತೆ ತನಿಖೆಯ ಬಳಿಕ ಸ್ಪಷ್ಟವಾಗಬೇಕಿದೆ.

- Advertisement -

Related news

error: Content is protected !!