Wednesday, September 23, 2026
spot_imgspot_img
spot_imgspot_img

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಹಾಗೂ ಅನುಚಿತ ವರ್ತನೆ ಆರೋಪ-ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ವಿಲ್ಫ್ರೆಡ್ ಲಾರೆನ್ಸ್ ರೊಡ್ರಿಗಸ್ ಅಮಾನತು

- Advertisement -
- Advertisement -

ಉಪ್ಪಿನಂಗಡಿ: ಸಾರ್ವಜನಿಕ ಸೇವೆಗಳಲ್ಲಿ ವಿಳಂಬ, ಲಂಚದ ಬೇಡಿಕೆ ಹಾಗೂ ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪಗಳ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ವಿಲ್ಫ್ರೆಡ್ ಲಾರೆನ್ಸ್ ರೊಡ್ರಿಗಸ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಪ್ರಸ್ತುತ ಆರ್ಯಾಪು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ವಿಲ್ಫ್ರೆಡ್ ಲಾರೆನ್ಸ್ ರೊಡ್ರಿಗಸ್ ಅವರು ಇತ್ತೀಚಿನವರೆಗೂ ಉಪ್ಪಿನಂಗಡಿ ಗ್ರಾಮ ಪಂಚಾಯಿತಿಯ ಪಿಡಿಒ ಆಗಿದ್ದರು.

ಸುಮಾರು 20 ದಿನಗಳ ಹಿಂದೆ ಅವರನ್ನು ಉಪ್ಪಿನಂಗಡಿಯಿಂದ ಆರ್ಯಾಪು ಗ್ರಾಮ ಪಂಚಾಯಿತಿಗೆ ವರ್ಗಾವಣೆ ಮಾಡಲಾಗಿತ್ತು. ವರ್ಗಾವಣೆಯ ಬಳಿಕವೂ ಅವರು ಉಪ್ಪಿನಂಗಡಿ ಪಂಚಾಯಿತಿಯ ಪ್ರಭಾರ ಪಿಡಿಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.ಸೆ.9ರಂದು ಲೋಕಾಯುಕ್ತ ಇಲಾಖೆಯ ಅಧಿಕಾರಿಗಳ ತಂಡ ಉಪ್ಪಿನಂಗಡಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಈ ವೇಳೆ ಸಾರ್ವಜನಿಕರಿಗೆ ದೊರೆಯಬೇಕಾದ ಸೇವೆಗಳಲ್ಲಿ ವಿಳಂಬ, ಲಂಚದ ಬೇಡಿಕೆ ಹಾಗೂ ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸಿರುವ ಬಗ್ಗೆ ದೂರುಗಳು ಕೇಳಿಬಂದಿದ್ದವು ಎನ್ನಲಾಗಿದೆ.

ಈ ಸಂಬಂಧ 15ಕ್ಕೂ ಹೆಚ್ಚು ದೂರುಗಳು ಬಂದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಗಿದ್ದು, ಆರೋಪಗಳ ಕುರಿತು ಮೇಲ್ನೋಟಕ್ಕೆ ಅಂಶಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ವಿಲ್ಫ್ರೆಡ್ ಲಾರೆನ್ಸ್ ರೊಡ್ರಿಗಸ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಇವರ ವಿರುದ್ಧ ಈ ಹಿಂದೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಬಳಿಯೂ ದೂರುಗಳು ಬಂದಿದ್ದವು ಎಂದು ತಿಳಿದುಬಂದಿದೆ.

- Advertisement -

Related news

error: Content is protected !!