Friday, September 25, 2026
spot_imgspot_img
spot_imgspot_img

ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ನಂ.1 ಸ್ಥಾನಕ್ಕೇರಿದ ಗೌತಮ್ ಅದಾನಿ

- Advertisement -
- Advertisement -

ನವದೆಹಲಿ: ‘ಎಂಟಿ ಎಂ ಹುರುನ್ ಇಂಡಿಯಾ ರಿಚ್ ಲಿಸ್ಟ್-2026’ ಬಿಡುಗಡೆಯಾಗಿದ್ದು, ಈ ಬಾರಿ ಭಾರತದ ಶ್ರೀಮಂತರ ಪಟ್ಟಿಯಲ್ಲಿ ಉದ್ಯಮಿ ಗೌತಮ್ ಅದಾನಿ ಹಾಗೂ ಅವರ ಕುಟುಂಬ, ಮುಕೇಶ್ ಅಂಬಾನಿ ಅವರನ್ನು ಹಿಂದಿಕ್ಕಿ ಮತ್ತೆ ಮೊದಲ ಸ್ಥಾನಕ್ಕೇರಿದ್ದಾರೆ.

ಅದಾನಿ ಹಾಗೂ ಕುಟುಂಬದ ಒಟ್ಟು ಸಂಪತ್ತು ಶೇ.13ರಷ್ಟು ಏರಿಕೆಯಾಗಿದ್ದು, 9.23 ಲಕ್ಷ ಕೋಟಿ ರೂ.ಗೆ ತಲುಪಿದೆ. ಮತ್ತೊಂದೆಡೆ, ಮುಕೇಶ್ ಅಂಬಾನಿ ಹಾಗೂ ಕುಟುಂಬದ ಸಂಪತ್ತು ಶೇ.10ರಷ್ಟು ಕುಸಿದು 8.63 ಲಕ್ಷ ಕೋಟಿ ರೂ.ಗೆ ಇಳಿಕೆಯಾಗಿದೆ. ಇದರಿಂದಾಗಿ ಅದಾನಿ ಹಾಗೂ ಅಂಬಾನಿ ಕುಟುಂಬಗಳ ಸಂಪತ್ತಿನ ನಡುವೆ ಸುಮಾರು 59,400 ಕೋಟಿ ರೂ. ವ್ಯತ್ಯಾಸ ಉಂಟಾಗಿದೆ.

ಉಕ್ಕು ಉದ್ಯಮಿ ಲಕ್ಷ್ಮಿ ನಿವಾಸ್ ಮಿತ್ತಲ್ ಹಾಗೂ ಅವರ ಕುಟುಂಬದ ಸಂಪತ್ತು ಈ ಬಾರಿ ಏರಿಕೆ ಕಂಡಿದ್ದು, ಅವರ ಸಂಪತ್ತು ಸುಮಾರು ಎರಡು ಪಟ್ಟು ಹೆಚ್ಚಾಗಿ 3.39 ಲಕ್ಷ ಕೋಟಿ ರೂ.ಗೆ ತಲುಪಿದೆ. ಇದರೊಂದಿಗೆ ಅವರು ಭಾರತದ ಶ್ರೀಮಂತರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ್ದಾರೆ. ಔಷಧ ತಯಾರಿಕಾ ಸಂಸ್ಥೆ ಸೀರಂ ಇನ್‌ಸ್ಟಿಟ್ಯೂಟ್‌ನ ಸೈರಸ್ ಪೂನಾವಾಲಾ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಭಾರತದಲ್ಲಿ ಶತಕೋಟ್ಯಧಿಪತಿಗಳು ಸಂಖ್ಯೆಯೂ ಹೊಸ ದಾಖಲೆ ಬರೆದಿದೆ. ಈ ಬಾರಿ ದೇಶದಲ್ಲಿ 391 ಶತಕೋಟ್ಯಧಿಪತಿಗಳು ಇದ್ದಾರೆ ಎಂದು ವರದಿ ತಿಳಿಸಿದೆ. ಕನಿಷ್ಠ 1,000 ಕೋಟಿ ರೂ. ಸಂಪತ್ತು ಹೊಂದಿರುವ ಶ್ರೀಮಂತರ ಸಂಖ್ಯೆ ಕೂಡ 1,810ಕ್ಕೆ ಏರಿಕೆಯಾಗಿದೆ. ಇವರ ಒಟ್ಟು ಸಂಪತ್ತು ಸುಮಾರು 187.5 ಲಕ್ಷ ಕೋಟಿ ರೂ. ಎಂದು ವರದಿಯಲ್ಲಿ ತಿಳಿಸಲಾಗಿದೆ.

ಈ ಬಾರಿ ಬೆಂಗಳೂರಿನ ಉದ್ಯಮಿಗೂ ಪಟ್ಟಿಯಲ್ಲಿ ಸ್ಥಾನ ಸಿಕ್ಕಿದ್ದು, ಕ್ವಾಂಟಂ ಕಂಪ್ಯೂಟರ್ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ನಾಗೇಂದ್ರ ನಾಗರಾಜ್ ಮೊದಲ ಬಾರಿಗೆ ಈ ಪಟ್ಟಿಗೆ ಪ್ರವೇಶ ಪಡೆದಿದ್ದಾರೆ. ಅವರ ಸಂಪತ್ತು ಸುಮಾರು 1,700 ಕೋಟಿ ರೂ. ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!