- Advertisement -
- Advertisement -






ಬಂಟ್ವಾಳ: ಕಾರ್ಕಳ-ಸಾಣೂರು ಬಳಿ ಸೆ.20ರಂದು ನಡೆದ ಕಾರು ಅಪಘಾತದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಪಾರಾದ ಘಟನೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಸಂದೇಶ ಹರಿಯಬಿಟ್ಟ ಆರೋಪದ ಮೇಲೆ ಪ್ರಭಾಕರ ಹೆಗ್ಡೆ ಎಂಬಾತನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ನೇತೃತ್ವದ ನಿಯೋಗವು ಸೆ.23ರಂದು ಬಂಟ್ವಾಳ ನಗರ ಪೊಲೀಸರಿಗೆ ಈ ಕುರಿತು ದೂರು ನೀಡಿದೆ.
ರಮಾನಾಥ ರೈ ಅವರ ಕಾರು ಅಪಘಾತದ ದೃಶ್ಯವನ್ನು ಯಾರೋ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದ ಪೋಸ್ಟ್‌ಗೆ ಪ್ರಭಾಕರ ಹೆಗ್ಡೆ ಎಂಬಾತ ಅವಾಚ್ಯ ಶಬ್ದಗಳನ್ನು ಬಳಸಿ ಕಾಮೆಂಟ್ ಮಾಡಿದ್ದು, ಬೆದರಿಕೆಯ ರೀತಿಯ ಸಂದೇಶವನ್ನೂ ಹರಿಯಬಿಟ್ಟಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ಸಾಮಾಜಿಕ ಜಾಲತಾಣದಲ್ಲಿ ಈ ರೀತಿಯ ಅವಹೇಳನಕಾರಿ ಹಾಗೂ ಬೆದರಿಕೆ ಸಂದೇಶ ಹರಿಯಬಿಟ್ಟಿರುವ ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಕೋರಲಾಗಿದೆ.
- Advertisement -








