Thursday, September 24, 2026
spot_imgspot_img
spot_imgspot_img

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ:ಸುಪ್ರೀಂ ಆದೇಶದ ಬೆನ್ನಲ್ಲೇ ಎಸ್‌ಐಟಿ ರಚನೆ-ಶಶಿಕುಮಾರ್ ಮುಖ್ಯಸ್ಥ

- Advertisement -
- Advertisement -


ಬೆಳ್ತಂಗಡಿ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂಕೋರ್ಟ್ ಆದೇಶಿಸಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ.


ಹಿರಿಯ ಪೊಲೀಸ್ ಅಧಿಕಾರಿ ಎನ್. ಶಶಿಕುಮಾರ್ ಅವರನ್ನು ಎಸ್‌ಐಟಿ ಮುಖ್ಯಸ್ಥರನ್ನಾಗಿ ನೇಮಿಸಲಾಗಿದ್ದು, ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಸೇರಿದಂತೆ ನಿಶಾ ಜೇಮ್ಸ್, ಲೋಕೇಶ್ ಮತ್ತು ವೆಂಕಟೇಶ್ ಪ್ರಸನ್ನ ಅವರನ್ನು ತಂಡದ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಅಧಿಕೃತ ಆದೇಶ ಇನ್ನಷ್ಟೇ ಹೊರಬೀಳಬೇಕಿದೆ.


ಮೂರು ತಿಂಗಳ ಗಡುವು: ಸುಪ್ರೀಂಕೋರ್ಟ್ ನಿರ್ದೇಶನದಂತೆ ಎಸ್‌ಐಟಿ ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ಪೊಲೀಸ್ ವರದಿ ಸಲ್ಲಿಸಬೇಕು. ಈ ಹಿಂದೆ ಬೆಳ್ತಂಗಡಿ ಪೊಲೀಸರು, ಸಿಐಡಿ ಹಾಗೂ ಸಿಬಿಐ ತನಿಖೆಯಲ್ಲಿ ಭಾಗಿಯಾಗಿದ್ದ ಅಧಿಕಾರಿಗಳನ್ನು ಹೊಸ ಎಸ್‌ಐಟಿಯಲ್ಲಿ ಸೇರಿಸಬಾರದು ಎಂದು ನ್ಯಾಯಾಲಯ ಷರತ್ತು ವಿಧಿಸಿದೆ.


ಪ್ರಕರಣದಲ್ಲಿ ಈ ಹಿಂದೆ ಆರೋಪಿಯಾಗಿದ್ದ ಸಂತೋಷ್ ರಾವ್ ಅವರನ್ನು 2023ರಲ್ಲಿ ನ್ಯಾಯಾಲಯ ಖುಲಾಸೆಗೊಳಿಸಿರುವ ಹಿನ್ನೆಲೆಯಲ್ಲಿ, ಅವರ ವಿರುದ್ಧ ಇದೇ ಪ್ರಕರಣದಲ್ಲಿ ಮರುತನಿಖೆ ನಡೆಸಬಾರದು ಎಂದೂ ಸುಪ್ರೀಂಕೋರ್ಟ್ ಸೂಚಿಸಿದೆ.


ಹೊಸ ತಂಡವು ಲಭ್ಯವಿರುವ ಸಾಕ್ಷ್ಯಗಳು, ವೈಜ್ಞಾನಿಕ ಪುರಾವೆಗಳು ಹಾಗೂ ಸಂಭಾವ್ಯ ಸಾಕ್ಷಿಗಳನ್ನು ಪರಿಶೀಲಿಸಿ ತನಿಖೆ ನಡೆಸಲಿದೆ.

- Advertisement -

Related news

error: Content is protected !!