- Advertisement -
- Advertisement -



ವಿಟ್ಲ: ವಿಟ್ಲ ಸಂತೆ ರಸ್ತೆಯ ಬಳಿ ಪಾದಚಾರಿ ಮಹಿಳೆಗೆ ಆಕ್ಟಿವಾ ಸ್ಕೂಟರ್ (KA19 HN 2131) ಸವಾರನೊಬ್ಬ ಡಿಕ್ಕಿ ಹೊಡೆದು ಅಪಘಾತ ನಡೆದಿದೆ.
ಗಾಯಗೊಂಡ ಮಹಿಳೆಯನ್ನು ಸಾರ್ವಜನಿಕರು ವಿಟ್ಲ ಸಮುದಾಯ ಆಸ್ಪತ್ರೆಗೆ ರವಾನಿಸಿದ್ದಾರೆ.
ತಲೆಗೆ ಮತ್ತು ಕಾಲಿಗೆ ಗಂಭೀರ ಗಾಯಗೊಂಡಿರುವ ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಗಂಭೀರ ಗಾಯಗೊಂಡ ಮಹಿಳೆ ಇಡ್ಕಿದು ಗ್ರಾಮದ ಕಾರ್ಯಾಡಿ ನಿವಾಸಿ ಕಲ್ಯಾಣಿ ಎಂದು ಗುರುತಿಸಲಾಗಿದೆ.
- Advertisement -








