
ಬೆಂಗಳೂರು: ರವಿವಾರ ಗುವಾಹಟಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಲವಾದ ಗಾಳಿಯ ನಡುವೆ ಇಳಿಯುವಾಗ ‘ಅಸಹಜ ರನ್‌ವೇ ಸ್ಪರ್ಶ’ ಅನುಭವಿಸಿದೆ ಎಂದು ವಿಮಾನಯಾನ ಸಂಸ್ಥೆಯು ತಿಳಿಸಿದೆ.ಮೊದಲ ಪ್ರಯತ್ನದಲ್ಲಿ ಇಳಿಯಲು ವಿಫಲವಾಗಿದ್ದ ವಿಮಾನವು ಆಗಸದಲ್ಲಿ ಕೆಲವು ಸುತ್ತುಗಳನ್ನು ಹಾಕಿದ ಬಳಿಕ ಎರಡನೇ ಪ್ರಯತ್ನದಲ್ಲಿ ಇಳಿಯಲು ಮುಂದಾಗಿತ್ತು. ನಂತರದ ಲ್ಯಾಂಡಿಂಗ್ ವೇಳೆ ವಿಮಾನದ ಹಿಂಭಾಗವು ರನ್‌ವೇಗೆ ಸ್ಪರ್ಶಿಸಿದೆ.
ಎಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿಗಳು ಸುರಕ್ಷಿತವಾಗಿದ್ದಾರೆ ಎಂದು ಇಂಡಿಗೋ ಹೇಳಿಕೆಯಲ್ಲಿ ತಿಳಿಸಿದೆ. ಸುರಕ್ಷಿತವಾಗಿದ್ದಾರೆ ಎಂದು ಇಂಡಿಗೋ ಹೇಳಿಕೆಯಲ್ಲಿ ತಿಳಿಸಿದೆ.ಬಲವಾದ ಗಾಳಿಯ ನಡುವೆ ಈ ಘಟನೆ ಸಂಭವಿಸಿದ್ದು, ಪ್ರಮಾಣಿತ ಕಾರ್ಯವಿಧಾನಗಳ ಪ್ರಕಾರ ಸಂಬಂಧಪಟ್ಟ ಎಲ್ಲ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಇಂಡಿಗೋ ಸಂಸ್ಥೆ ತಿಳಿಸಿದೆ.ಪ್ರಸ್ತುತ ವಿಮಾನವು ನಿರ್ವಹಣಾ ತಪಾಸಣೆಗೆ ಒಳಪಟ್ಟಿದ್ದು, ಅಗತ್ಯ ಅನುಮತಿಗಳನ್ನು ಪಡೆದ ನಂತರ ಕಾರ್ಯಾಚರಣೆಯನ್ನು ಪುನರಾರಂಭಿಸಲಿದೆ ಎಂದು ಅದು ತಿಳಿಸಿದೆ.







