- Advertisement -
- Advertisement -



ಬೆಂಗಳೂರು: ಕೆಂಗೇರಿ ಸಮೀಪದ ಆರ್.ಆರ್ ವೈದ್ಯಕೀಯ ಕಾಲೇಜು ಹಿಂಭಾಗದಲ್ಲಿ ಆನೆ ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಅಂಚೆಪಾಳ್ಯ ಗ್ರಾಮದ ನಾಗರಾಜ್ ಮೃತ ದುರ್ದೈವಿ. ಇಂದು ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ಘಟನೆ ನಡೆದಿದೆ. ವಾಕಿಂಗ್ಗೆ ಹೋಗಿದ್ದ ವ್ಯಕ್ತಿ ಮೇಲೆ ಆನೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳದಲ್ಲಿ ಎರಡೂ ಕಾಂಪೌಂಡ್ಗಳೂ ಸಹ ಉರುಳಿಬಿದ್ದಿದ್ದು, ಸ್ಥಳೀಯರು ಕೂಡ ಆನೇ ದಾಳಿಯಿಂದಲೇ ಘಟನೆ ನಡೆದಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.
- Advertisement -








