Monday, September 28, 2026
spot_imgspot_img
spot_imgspot_img

ಮಂಗಳೂರು ಸಬ್ ಜೈಲಿನಲ್ಲಿ ಮಾಡೂರು ಯುಸುಫ್ ಹತ್ಯೆ ಪ್ರಕರಣ: ಐವರು ಆರೋಪಿಗಳು ದೋಷಿ

- Advertisement -
- Advertisement -

ಮಂಗಳೂರು: 2015ರಲ್ಲಿ ಮಂಗಳೂರು ಸಬ್ ಜೈಲಿನಲ್ಲಿ ನಡೆದ ಮಾಡೂರು ಯುಸುಫ್ ಹತ್ಯೆ ಪ್ರಕರಣದ ತೀರ್ಪು ಸೆ.28ರಂದು ಪ್ರಕಟಗೊಂಡಿದ್ದು, ಪ್ರಕರಣದ 10 ಆರೋಪಿಗಳ ಪೈಕಿ ಐವರು ಆರೋಪಿಗಳು ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದೆ.ಮಂಗಳೂರು ನಗರದ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು ಸಬ್ ಜೈಲಿನಲ್ಲಿ 2015ರ ನ.2ರಂದು ಮಾಡೂರು ಯುಸುಫ್ ಎಂಬಾತನನ್ನು ಹತ್ಯೆ ಮಾಡಲಾಗಿತ್ತು. ಈ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಐಪಿಸಿ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಅಂದಿನ ಎಸಿಪಿ ತಿಲಕ್ ಚಂದ್ರ ಅವರು 2016ರ ಜ.28ರಂದು ಮಂಗಳೂರು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.ಪ್ರಕರಣವು SC No.151/2021ರಂತೆ ವಿಚಾರಣೆ ನಡೆದಿದ್ದು, ಸೆ.28ರಂದು ತೀರ್ಪು ಪ್ರಕಟವಾಗಿದೆ. ಲಿತೇಶ್ ಪೂಜಾರಿ, ಶೋಭರಾಜ್, ಯುವರಾಜ್, ಪ್ರದೀಪ್ ಹಾಗೂ ಉಮೇಶ್ ಕೊಂಬಾರ್ ವಿರುದ್ಧ ಆರೋಪ ಸಾಬೀತಾಗಿದ್ದು, ನ್ಯಾಯಾಲಯವು ಐವರನ್ನೂ ದೋಷಿಗಳೆಂದು ತೀರ್ಪು ನೀಡಿದೆ.ಇನ್ನು ಶರಣ್ ಪೂಜಾರಿ, ಮಹೇಶ್ ಕುಮಾರ್, ಕಮಲಾಕ್ಷ ಪೂಜಾರಿ ಹಾಗೂ ಸತೀಶ್ ಪೂಜಾರಿ ಅವರನ್ನು ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ.

ಈ ಪೈಕಿ ಸತೀಶ್ ಪೂಜಾರಿ ಮೃತಪಟ್ಟಿದ್ದಾರೆ.ದೋಷಿಗಳಾದ ಐವರಿಗೆ ವಿಧಿಸಬೇಕಾದ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಇನ್ನಷ್ಟೇ ಪ್ರಕಟಿಸಬೇಕಿದೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಮೋಹನ್ ಅವರು ವಾದ ಮಂಡಿಸಿದ್ದರು.

- Advertisement -

Related news

error: Content is protected !!