Tuesday, September 29, 2026
spot_imgspot_img
spot_imgspot_img

ಮಂಗಳೂರು: ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ಕಿರುಕುಳ: ಮೂವರ ಬಂಧನ

- Advertisement -
- Advertisement -

ಮಂಗಳೂರು : ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದಲ್ಲಿ ಮೂವರನ್ನು ಪಾಂಡೇಶ್ವರ ಮತ್ತು ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಸೆ.27ರಂದು ಬೋಳಾರ ಜಂಕ್ಷನ್ ಬಳಿ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಎಮ್ಮೆಕೆರೆ ನಿವಾಸಿ ಪ್ರದೀಪ್ (18) ಎಂಬಾತನನ್ನು ಪಾಂಡೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ.

.ನಗರದ ಶಿವಬಾಗ್ ಬಳಿ ಮಾದಕ ವಸ್ತು ಸೇವನೆ ಮಾಡಿದಂತೆ ಕಂಡು ಬಂದ ಬೋಳಿಯಾರ್ ಪಲ್ಲ ಸೈಟ್ ನಿವಾಸಿ ಇರ್ಪಾನ್ ಯಾನೆ ನಾಸಿರ್ (27) ಮತ್ತು ಕಣ್ಣೂರಿನ ಫಹಾದ್ ಅಬ್ದುಲ್ ರಹ್ಮಾನ್ (26) ಎಂಬವರನ್ನು ಬಂಧಿಸಲಾಗಿದೆ. ವಿಚಾರಣೆಗೆ ಒಳಪಡಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಆರೋಪ ದೃಢಪಟ್ಟಿದೆ. ಮೂವರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

- Advertisement -

Related news

error: Content is protected !!