- Advertisement -
- Advertisement -



ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪ್ರದೋಶ್ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವ ಆದೇಶವನ್ನು ನ್ಯಾಯಾಲಯ ಎತ್ತಿಹಿಡಿದಿದೆ.
ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಮಾಫಿ ಸಾಕ್ಷಿ ಪ್ರದೋಶ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಮುಂದುವರಿದಿದೆ.
ಇದೇ ವೇಳೆ, ನಟ ದರ್ಶನ್ ಹಾಗೂ ಪವಿತ್ರಾಗೌಡ ಪರಪ್ಪನ ಅಗ್ರಹಾರ ಜೈಲಿನಿಂದ ವಿಡಿಯೋ ಕಾನ್ಸರೆನ್ಸ್ ಮೂಲಕ ನ್ಯಾಯಾಲಯದ ವಿಚಾರಣೆಗೆ ಹಾಜರಾದರು.
ಮಾಫಿ ಸಾಕ್ಷಿಯಾಗಲು ಪ್ರದೋಶ್ ಸಲ್ಲಿಸಿದ್ದ ಮನವಿಗೆ ಸಂಬಂಧಿಸಿದಂತೆ ಈ ಹಿಂದೆ ನ್ಯಾಯಾಲಯ ಆದೇಶ ನೀಡಿತ್ತು. ಇದೀಗ ಆ ಆದೇಶವನ್ನು ಎತ್ತಿಹಿಡಿದಿರುವ ಹಿನ್ನೆಲೆಯಲ್ಲಿ ಪ್ರದೋಶ್ ಅವರ ಹೇಳಿಕೆ ದಾಖಲು ಪ್ರಕ್ರಿಯೆ ಮುಂದುವರಿದಿದೆ.
ಪ್ರಕರಣದ ಮುಂದಿನ ವಿಚಾರಣೆಯಲ್ಲಿ ಪ್ರದೋಶ್ ನೀಡುವ ಹೇಳಿಕೆ ಪ್ರಮುಖವಾಗಲಿದ್ದು, 59ನೇ ಸಿಸಿಹೆಚ್ ನ್ಯಾಯಾಲಯದ ವಿಚಾರಣೆಯನ್ನು ಮುಂದುವರಿಸಿರುವುದಾಗಿ ತಿಳಿದುಬಂದಿದೆ.
- Advertisement -








