- Advertisement -
- Advertisement -


ಬೆಂಗಳೂರು: ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ ನಡೆಸಲು ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ಮೂವರು ನ್ಯಾಯಾಧೀಶರನ್ನು ಒಳಗೊಂಡ ಸಮಿತಿಯನ್ನು ರಚಿಸಿದ್ದಾರೆ.

ಈ ಸಮಿತಿಯಲ್ಲಿ ನ್ಯಾಯಾಧೀಶರಾದ ಅನು ಶಿವರಾಮನ್, ಎಸ್.ಜಿ. ಪಂಡಿತ್, ಮುಹಮ್ಮದ್ ನವಾಝ್ ಸದಸ್ಯರಾಗಿರುತ್ತಾರೆ.ದ.ಕ., ಉಡುಪಿ, ಶಿವಮೊಗ್ಗ ಚಿಕ್ಕಮಗಳೂರು, ಕೊಡಗು, ಹಾಸನ, ಉತ್ತಡ ಕನ್ನಡ ಜಿಲ್ಲೆಯ ಜನತೆಯ ಹಿತದೃಷ್ಟಿಯಿಂದ ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸಬೇಕು ಎಂಬ ಬೇಡಿಕೆ ಕೆಲವು ಸಮಯದಿಂದ ಕೇಳಿ ಬಂದಿತ್ತು.

ಮಂಗಳೂರಿಗೆ ಆಗಮಿಸಿದ್ದ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ಕೂಡ ಈ ಬಗ್ಗೆ ಪರಿಶೀಲನೆ ನಡೆಸಲಾ ಗುವುದು ಎಂದು ಭರವಸೆ ನೀಡಿದ್ದರು. ಅದರಂತೆ ಇದೀಗ ಮೂವರು ನ್ಯಾಯಾಧೀಶರನ್ನು ಒಳಗೊಂಡ ಸದಸ್ಯರನ್ನು ಪರಿಶೀಲನಾ ಸಮಿತಿಗೆ ನೇಮಿಸಿ ಆದೇಶಿಸಿದ್ದಾರೆ.
- Advertisement -








