

ಬಂಟ್ವಾಳ: ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಜಿಲ್ಲಾ ಸಂಘ (ರಿ), ದಕ್ಷಿಣ ಕನ್ನಡ ಜಿಲ್ಲೆ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಸೆ.29ರಂದು ಬಿ.ಸಿ.ರೋಡ್‌ನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.ಇಸ್ಮಾಯಿಲ್ ಬನಾರಿ ಸ್ವಾಗತಿಸಿದರು. ಜಿಲ್ಲಾ ಅಧ್ಯಕ್ಷ ಧನ್ ರಾಜ್ ಶೆಟ್ಟಿ ಪರಂಗಿಪೇಟೆ, ಗೌರವಾಧ್ಯಕ್ಷ ರಾಜಶೇಖರ್ ಶೆಟ್ಟಿ ಕುಡ್ತಮುಗೇರು, ಕಾರ್ಯದರ್ಶಿ ಮಹೇಶ್ ಬೋಳಾರ್ ಹಾಗೂ ಕೋಶಾಧಿಕಾರಿ ಬೆನಟ್ಹ್ ಡಿಸಿಲ್ವಾ ಮಂಗಳೂರು ಉಪಸ್ಥಿತರಿದ್ದರು.

ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ಹಾಗೂ ಮಂಗಳೂರು ತಾಲೂಕುಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯಲ್ಲಿ ಸಂಘದ ಮುಂದಿನ ಕಾರ್ಯಯೋಜನೆಗಳ ಕುರಿತು ಚರ್ಚಿಸಿ, ಸದಸ್ಯರ ಸಮಸ್ಯೆಗಳನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಲಾಯಿತು.ಇದೇ ಸಂದರ್ಭದಲ್ಲಿ 2026-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಅಧ್ಯಕ್ಷರಾಗಿ ಧನ್ ರಾಜ್ ಶೆಟ್ಟಿ ಪರಂಗಿಪೇಟೆ ಅವರನ್ನು ಮರು ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ಸಂತೋಷ್ ಕುರಿಯಾಳ ಹಾಗೂ ಕೋಶಾಧಿಕಾರಿಯಾಗಿ ಮಾತುಕುಟ್ಟಿ ಧರ್ಮಸ್ಥಳ ಅವರನ್ನು ಆಯ್ಕೆ ಮಾಡಲಾಯಿತು.ಲೋಹಿತ್ ಬ್ರಹ್ಮರಕೂಟ್ಲ ಧನ್ಯವಾದ ಅರ್ಪಿಸಿದರು.








