


ನವದೆಹಲಿ: ದೇಶದಲ್ಲಿ 18 ವರ್ಷದೊಳಗಿನ ಅಪ್ರಾಪ್ತರಿಗೆ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ಬಂಧಿಸಲು ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಯೋಜಿಸುತ್ತಿದ್ದು, ಈ ಸಂಬಂಧ, ಶಾಸನಬದ್ಧ ನಿಯಮಗಳನ್ನು ಜಾರಿಗೆ ತರುವ ಸಾಧ್ಯತೆಯನ್ನು ಪರಿಶೀಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ ಮೋಹನ ಅವರನ್ನೊಳಗೊಂಡ ಪೀಠವು `ಜಸ್ಟ್ ರೈಟ್ಸ್’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ವಿಚಾರಣೆ ನಡೆಸಿತು. ಈ ವೇಳೆ, ಡಿಜಿಟಲ್ ಪರಿಸರದಲ್ಲಿ ಮಕ್ಕಳು ಎದುರಿಸುವ ಅಪಾಯಗಳನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಒಪ್ಪಿಕೊಂಡರು.
ಅಪ್ರಾಪ್ತರು ಈ ವೇದಿಕೆಗಳಲ್ಲಿ ನೋಂದಾಯಿಸುವುದನ್ನು ತಡೆಯುವುದನ್ನು ಮಧ್ಯವರ್ತಿಗಳಿಗೆ ಕಡ್ಡಾಯಗೊಳಿಸಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಹೊಸ ಶಾಸನಬದ್ಧ ಕ್ರಮಗಳ ಮೂಲಕ ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳನ್ನು ಬಲಪಡಿಸಲಾಗುವುದು ಎಂದು ಕೋರ್ಟ್ ಸೂಚಿಸಿರುವುದಾಗಿ ತಿಳಿದುಬಂದಿದೆ.








