Wednesday, September 30, 2026
spot_imgspot_img
spot_imgspot_img

ಮಂಗಳೂರು: MRPLನ CHT ಘಟಕದಲ್ಲಿ ಸ್ಫೋಟ; ಓರ್ವ ಸಾವು, 8 ಮಂದಿಗೆ ಗಾಯ

- Advertisement -
- Advertisement -

ಮಂಗಳೂರು: ಜೋಕಟ್ಟೆ ಸಮೀಪದ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ (MRPL)ನ CHT ಘಟಕದಲ್ಲಿ ಸ್ಫೋಟ ಸಂಭವಿಸಿ ಓರ್ವ ಮೃತಪಟ್ಟಿದ್ದು, 8 ಮಂದಿ ಗಾಯಗೊಂಡಿದ್ದಾರೆ.

ಸ್ಫೋಟದ ಬಳಿಕ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಸ್ಫೋಟದಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿತ್ತು.ಘಟನೆಯ ಪರಿಣಾಮ MRPL ಪಕ್ಕದಲ್ಲಿರುವ ಅಂಗನವಾಡಿಯ ಕಿಟಕಿ ಗಾಜು ಹಾಗೂ ಗೋಡೆಗೆ ಹಾನಿಯಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿಯಲ್ಲಿದ್ದ ಮಕ್ಕಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.ಸ್ಫೋಟ ಸಂಭವಿಸಿದ ಸ್ಥಳದ ಸಮೀಪದಲ್ಲಿದ್ದ ಹಳೆಯಂಗಡಿ ನಿವಾಸಿ, MRPLನಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ 30 ವರ್ಷದ ಮನೀಶ್ ಮೃತಪಟ್ಟಿದ್ದಾರೆ.

ಸ್ಫೋಟದ ತೀವ್ರತೆಗೆ ಮನೀಶ್ ಗಂಭೀರವಾಗಿ ಸುಟ್ಟು ಮೃತಪಟ್ಟಿದ್ದು, ಮೃತದೇಹವನ್ನು ಹೊರತೆಗೆಯಲು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.ಘಟನೆಯಲ್ಲಿ ರಾಜೇಶ್ ಬ್ಯಾಪ್ಟಿಸ್ಟ್ ಅವರಿಗೆ ಸುಮಾರು ಶೇ.35ರಷ್ಟು ಸುಟ್ಟ ಗಾಯಗಳಾಗಿದ್ದು, ಅವರನ್ನು ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಲಾಗಿದೆ. ICUನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜೇಶ್ ಸದ್ಯ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!