- Advertisement -
- Advertisement -



ಕಾಬುಲ್: ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ 5.3 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ಭಾರತದ ರಾಷ್ಟ್ರೀಯ ಭೂಕಂಪನ ಕೇಂದ್ರ ತಿಳಿಸಿದೆ.
ಗುರುವಾರ (ಅ.1) ಮುಂಜಾನೆ 6:59ರ ಸುಮಾರಿಗೆ 5.3 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ 126 ಕಿಲೋಮೀಟರ್ ಆಳದಲ್ಲಿ ಭೂಕಂಪನ ಕೇಂದ್ರ ಬಿಂದು ಪತ್ತೆಯಾಗಿದೆ.
ಭೂಕಂಪನದಲ್ಲಿ ಸಾವು-ನೋವಿನ ಬಗ್ಗೆ ಯಾವುದೇ ವರದಿಯಾಗಿಲ್ಲ. ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಸುತ್ತಮುತ್ತಲಿನ ಹಿಂದೂ ಕುಶ್ ಪ್ರದೇಶವು ಭೂಕಂಪನ ಪೀಡಿತ ಪ್ರದೇಶಗಳಲ್ಲಿ ಒಂದಾಗಿದೆ.
- Advertisement -








