- Advertisement -
- Advertisement -

ಸುಳ್ಯ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


ಸುಳ್ಯ ಪೊಲೀಸ್ ಠಾಣಾ ಅ.ಕ್ರ. 252/2014ರಲ್ಲಿ IPC ಕಲಂ 399, 402ರ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇರಳದ ಕಾಸರಗೋಡು ನಿವಾಸಿ ಅಶ್ರಫ್ ಎಂಬಾತನನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ಸುಳ್ಯ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ HC 368 ರಾಜು ನಾಯ್ಕ ಹಾಗೂ PC 2308 ಸಂತೋಷ್ ಅವರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
- Advertisement -








