- Advertisement -
- Advertisement -
ಸುಳ್ಯ: ಗ್ಯಾರೇಜ್ನಲ್ಲಿ ಇರಿಸಲಾಗಿದ್ದ ಬೈಕ್ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.

ಆಗಸ್ಟ್ 26ರಂದು ರಾತ್ರಿ ಸುಳ್ಯ ಕಸಬಾ ಗ್ರಾಮದ ಅಂಬೆಟಡ್ಕ ಎಂಬಲ್ಲಿ ಗ್ಯಾರೇಜ್ನಲ್ಲಿ ಇರಿಸಿದ್ದ ಬೈಕ್ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟಿದ್ದರು. ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ. 120/2026ರಂತೆ BNS 2023ರ ಕಲಂ 326(g) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನರಾಜು (23) ಎಂಬವರನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಇಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಿದೆ.
- Advertisement -








