Friday, October 2, 2026
spot_imgspot_img
spot_imgspot_img

ಭಟ್ಕಳ ದೇವಸ್ಥಾನದಲ್ಲಿ ಕಳವು ಪ್ರಕರಣ: 24 ಗಂಟೆಯೊಳಗೆ ಆರೋಪಿ ಸೆರೆ

- Advertisement -
- Advertisement -

ಭಟ್ಕಳ: ಬೆಳಕೆ ಗ್ರಾಮದ ಗರಡಿಹಿತ್ತು ಶ್ರೀ ಭಂಟಗೊಡ ದೇವಸ್ಥಾನದಲ್ಲಿ ನಡೆದ ಕಳವು ಪ್ರಕರಣವನ್ನು ಭಟ್ಕಳ ಗ್ರಾಮೀಣ ಪೊಲೀಸರು 24 ಗಂಟೆಯೊಳಗೆ ಪತ್ತೆಹಚ್ಚಿ ಆರೋಪಿಯನ್ನು ಬಂಧಿಸಿ ಕಳುವಾದ ಚಿನ್ನಾಭರಣ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಸೆ.29ರ ರಾತ್ರಿ ದೇವಸ್ಥಾನದ ಮುಂಭಾಗದ ಬಾಗಿಲಿನ ಬೀಗ ಮುರಿದು, ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಕಳವು ಮಾಡಲಾಗಿತ್ತು.

ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಆರೋಪಿಯ ಪತ್ತೆಗೆ ವಿಶೇಷ ತಂಡ ರಚಿಸಿ ತನಿಖೆ ಕೈಗೊಂಡ ಪೊಲೀಸರು, ಸಾಕ್ಷಾಧಾರ ಹಾಗೂ ಸ್ಥಳೀಯರಿಂದ ದೊರೆತ ಮಾಹಿತಿಯ ಆಧಾರದಲ್ಲಿ ಹೆಬಳೆಯ ತಹಲಾ ಕಾಲನಿ ನಿವಾಸಿ ಯುನುಸ್ ಅಹ್ಮದ್ ಎಂಬಾತನನ್ನು ಬಂಧಿಸಿದ್ದಾರೆ.ಆತನಿಂದ ಕಳುವಾದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಕಾರ್ಯಾಚರಣೆಯಲ್ಲಿ ಎಸ್‌ಪಿ ದೀಪನ್‌ ಎಂ.ಎನ್., ಹೆಚ್ಚುವರಿ ಎಸ್‌ಪಿ ಕೃಷ್ಣಮೂರ್ತಿ ಹಾಗೂ ಎಎಸ್‌ಪಿ ರಾಣು ಗುಪ್ತಾ ಅವರ ಮಾರ್ಗದರ್ಶನದಲ್ಲಿ ನಗರ ಠಾಣೆಯ ಇನ್‌ಸ್ಪೆಕ್ಟ‌ರ್ ದಿವಾಕರ ಪಿ.ಎಂ. ಸೇರಿದಂತೆ ಗ್ರಾಮೀಣ ಠಾಣೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.

- Advertisement -

Related news

error: Content is protected !!