Friday, October 2, 2026
spot_imgspot_img
spot_imgspot_img

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಜೊತೆ ಪ್ರಧಾನಿ ಮೋದಿ ಮಾತುಕತೆ; ಶೀಘ್ರ ಚೇತರಿಕೆಗೆ ಹಾರೈಕೆ

- Advertisement -
- Advertisement -

ನವದೆಹಲಿ: ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ‘ಫ್ಲೈದುಬೈ’ ವಿಮಾನದಲ್ಲಿ ಸಹ-ಪೈಲಟ್ ನಡೆಸಿದ ದಾಳಿಯ ಯತ್ನವನ್ನು ವಿಫಲಗೊಳಿಸುವ ಮೂಲಕ 180 ಜನರ ಪ್ರಾಣ ಉಳಿಸಿದ ಭಾರತದ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಅ.02) ಮಾತನಾಡಿದರು.

ಕ್ಯಾಪ್ಟನ್ ಮಚ್ಚಾರ್‌ ವಿಮಾನದಲ್ಲಿ ತಮಗಾದ ಅನುಭವದ ವಿವರಗಳನ್ನು ಪ್ರಧಾನಿ ಮೋದಿ ಜೊತೆ ಹಂಚಿಕೊಂಡರು. ಆ ಘಟನೆಯ ಸಮಯದಲ್ಲಿ ತಮಗೆ ಧೈರ್ಯ ನೀಡಿದ ಅಂಶಗಳ ಬಗ್ಗೆಯೂ ಮಾತನಾಡಿದರು. ಪ್ರಧಾನ ಮಂತ್ರಿಯವರು ಅವರ ಧೈರ್ಯವನ್ನು ಶ್ಲಾಘಿಸಿ, ಪೈಲಟ್‌ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.

ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರು ಯುಎಇಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಯುಎಇಯಲ್ಲಿರುವ ಭಾರತದ ರಾಯಭಾರಿ ದೀಪಕ್ ಮಿತ್ತಲ್ ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಗಾಯಗೊಂಡ ಪೈಲಟ್ ಮತ್ತು ಅವರ ಕುಟುಂಬವನ್ನು ಭೇಟಿಯಾದ ದೀಪಕ್ ಮಿತ್ತಲ್, ಸ್ಮಿತ್ ಮಚ್ಚಾರ್ ಅವರ ಮನೋಬಲವು ಉತ್ತಮವಾಗಿದ್ದು, ಅವರು ಹರ್ಷಚಿತ್ತದಿಂದ ಇದ್ದಾರೆಂದು ತಿಳಿಸಿದ್ದಾರೆ.

ಗುರುವಾರವಷ್ಟೇ, ವಿಮಾನದ ಕಾಕ್‌ಪಿಟ್‌ನಲ್ಲಿ ನಡೆದ ದಾಳಿಯ ಸಂದರ್ಭದಲ್ಲಿ ತೋರಿದ ಧೈರ್ಯ ಹಾಗೂ ಸಮಯಪ್ರಜ್ಞೆಗಾಗಿ ಪ್ರಧಾನಿ ಮೋದಿ ಅವರು ಕ್ಯಾಪ್ಟನ್ ಮಚ್ಚಾರ್‌ ಅವರನ್ನು ಶ್ಲಾಘಿಸಿದ್ದರು. ಪೈಲಟ್ ಅವರ ಈ ಶೌರ್ಯವು ಇಡೀ ದೇಶಕ್ಕೆ ಹೆಮ್ಮೆ ತಂದಿದೆ ಮತ್ತು ದೊಡ್ಡ ದುರಂತವೊಂದನ್ನು ತಪ್ಪಿಸಲು ನೆರವಾಗಿದೆ ಎಂದು ಮೋದಿ ತಿಳಿಸಿದ್ದರು.

- Advertisement -

Related news

error: Content is protected !!