Friday, October 2, 2026
spot_imgspot_img
spot_imgspot_img

ಎಸ್ಐಆರ್ ಅಕ್ರಮದ ವಿರುದ್ಧ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಪೊಲೀಸರಿಂದ ತಡೆ – 11 ಮೆಟ್ರೋ ನಿಲ್ದಾಣ ಬಂದ್

- Advertisement -
- Advertisement -

ನವದೆಹಲಿ: ಚುನಾವಣಾ ಪ್ರಕ್ರಿಯೆ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಇಂದು(ಅ.2) ನಡೆಯಬೇಕಿದ್ದ ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಪ್ರತಿಭಟನೆ ನಡೆಸದಂತೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಪೂರ್ವಾನುಮತಿ ಇಲ್ಲದೆ ಐದು ಅಥವಾ ಅದಕ್ಕಿಂತ ಹೆಚ್ಚು ಮಂದಿ ಸಾರ್ವಜನಿಕ ಸ್ಥಳಗಳಲ್ಲಿ ಗುಂಪುಗೂಡುವುದು ಅಥವಾ ಸಭೆ ನಡೆಸುವುದು, ಮೆರವಣಿಗೆ, ಪ್ರತಿಭಟನೆ, ಧರಣಿ ನಡೆಸುವುದನ್ನು ಆದೇಶದ ಅನ್ವಯ ನಿಷೇಧಿಸಲಾಗಿದ್ದು, ಘೋಷಣೆ ಕೂಗುವುದು, ಭಾಷಣ ಮಾಡುವುದು ಹಾಗೂ ಬ್ಯಾನರ್, ಫಲಕಗಳು, ಲಾಠಿ, ಕತ್ತಿ, ಕೋಲು, ಇಟ್ಟಿಗೆ, ಕಲ್ಲು ಹಾಗೂ ಇತರ ರೀತಿಯ ವಸ್ತುಗಳನ್ನು ಹೊತ್ತೊಯ್ಯುವುದಕ್ಕೂ ನಿರ್ಬಂಧ ವಿಧಿಸಲಾಗಿದೆ.

ಸಾರ್ವಜನಿಕರ ಸುರಕ್ಷತೆಗಾಗಿ, ಶಾಂತಿ ಸುವ್ಯವಸ್ಥೆ ಕಾಪಾಡುವುದು ಹಾಗೂ ಸಂಚಾರ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳುವ ಉದ್ದೇಶದಿಂದ ಈ ಆದೇಶ ಜಾರಿಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಂತರ್ ಮಂತರ್‌ನಲ್ಲಿ ಭದ್ರತೆಗಾಗಿ ಡ್ರೋನ್‌ಗಳನ್ನು ಬಳಸಲಾಗುತ್ತಿದೆ. ಅಲ್ಲದೇ ಜಂತರ್‌ ಮಂತರ್‌ಗೆ ಹತ್ತಿರದಲ್ಲಿರುವ ಹನ್ನೊಂದು ಮೆಟ್ರೋ ನಿಲ್ದಾಣಗಳನ್ನು ಮುಚ್ಚಲಾಗಿದೆ. ಪ್ರಮುಖ ರಸ್ತೆಗಳಲ್ಲಿ ಬ್ಯಾರೀಕೆಡ್‌ಗಳನ್ನು ಅಳವಡಿಸಲಾಗಿದೆ.

ಪ್ರತಿಭಟನೆ ನಡೆಸುತ್ತಿದ್ದ ಎಎಪಿ ನಾಯಕ ಸೌರಭ್ ಭಾರದ್ವಾಜ್ ಮತ್ತು ಪಕ್ಷದ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತ ಜ್ವಾನೇಶ್ ಕುಮಾರ್ ಅವರ ರಾಜೀನಾಮೆಗೆ ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದು, ಆಮ್ ಆದ್ಮಿ ಪಕ್ಷ, ಆರ್‌ಜೆಡಿ ಮತ್ತು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು, ನಾಗರಿಕ ಸಮಾಜದ ಗುಂಪುಗಳು ಹಾಗೂ ವಿದ್ಯಾರ್ಥಿ ಸಂಘಟನೆಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿವೆ. ಅಖಿಲ ಭಾರತ ವಿದ್ಯಾರ್ಥಿ ಸಂಘಟನೆ(ಎಐಎಸ್‌ಎ), ರಾಜ್ಯಸಭಾ ಸದಸ್ಯ ಮನೋಜ್ ಝಾ ಹಾಗೂ ವಕೀಲ ಪ್ರಶಾಂತ್ ಭೂಷಣ್ ಅವರು ಕರೆ ನೀಡಿದ್ದರು ಎಂದು ತಿಳಿದುಬಂದಿದೆ.

- Advertisement -

Related news

error: Content is protected !!