Friday, October 2, 2026
spot_imgspot_img
spot_imgspot_img

ಸೌಜನ್ಯ ಪ್ರಕರಣ ಮರುತನಿಖೆ: ಎಸ್‌ಐಟಿಗೆ ACP ಮನೋಜ್ ಕುಮಾರ್ ನಾಯಕ್ ನೇಮಕ

- Advertisement -
- Advertisement -

ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಆರಂಭವಾಗಿದ್ದು, ತನಿಖೆಗೆ ಸಂಬಂಧಿಸಿದಂತೆ ಎಸ್‌ಐಟಿ ತಂಡ ಮಹತ್ವದ ನಿರ್ಧಾರ ಕೈಗೊಂಡಿದೆ.ಪ್ರಕರಣದ ತನಿಖಾಧಿಕಾರಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಲೋಕೇಶ್ ಬಿ. ಜಗಲಾಸ್ಕರ್ ಅವರನ್ನು ನೇಮಕ ಮಾಡಲಾಗಿದ್ದು, ಅವರಿಗೆ ಸಹಾಯಕ ತನಿಖಾಧಿಕಾರಿಯಾಗಿ ಎಸಿಪಿ ಮನೋಜ್ ಕುಮಾರ್ ನಾಯಕ್ ಅವರನ್ನು ನೇಮಕ ಮಾಡಲಾಗಿದೆ.

ಪ್ರಕರಣದ ಗಂಭೀರತೆ ಹಾಗೂ ತನಿಖೆಯ ಅಗತ್ಯತೆಗಳನ್ನು ಪರಿಗಣಿಸಿ ಈ ನೇಮಕಾತಿ ಮಾಡಲಾಗಿದೆ ಎಂದು ತಿಳಿದುಬಂದಿದೆ.ಸೌಜನ್ಯ ಪ್ರಕರಣದ ಮರುತನಿಖೆ ಹಿನ್ನೆಲೆಯಲ್ಲಿ ಎಸ್‌ಐಟಿ ತಂಡ ಈಗಾಗಲೇ ಕಾರ್ಯಪ್ರವೃತ್ತವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಹಲವು ಅಂಶಗಳನ್ನು ಪರಿಶೀಲಿಸುವ ಸಾಧ್ಯತೆ ಇದೆ.

- Advertisement -

Related news

error: Content is protected !!