Sunday, October 4, 2026
spot_imgspot_img
spot_imgspot_img

ಕರ್ನಾಟಕ ಸರ್ಕಾರದಿಂದ ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ

- Advertisement -
- Advertisement -

ಬೆಂಗಳೂರು : ರಾಜ್ಯ ಸರಕಾರವು ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶನಿವಾರ ಆದೇಶ ಹೊರಡಿಸಿದೆ.

ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಅಮ್ಹಾನ್ ಆದಿತ್ಯ ಬಿಸ್ವಾಸ್‌ ಅವರನ್ನು ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ(ಇ-ಆಡಳಿತ)ಯ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾ‌ರ್ ಪಾಂಡೆ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಕಾರ್ಮಿಕ ಇಲಾಖೆಯ ಸರಕಾರದ ಕಾರ್ಯದರ್ಶಿ ಸಲ್ಮಾ ಕೆ.ಫಹೀಮ್ ಅವರನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸರಕಾರದ ಕಾರ್ಯದರ್ಶಿಯಾಗಿ ಹಾಗೂ ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಕ್ಯಾಪ್ಟನ್ ಡಾ.ರಾಜೇಂದ್ರ ಕೆ. ಅವರನ್ನು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

- Advertisement -

Related news

error: Content is protected !!