- Advertisement -
- Advertisement -


ವಿಟ್ಲ: ನವರಾತ್ರಿ ಹಬ್ಬದ ಪ್ರಯುಕ್ತ ವಿಟ್ಲದ ನವಿಲು ಬಸದಿಯಲ್ಲಿ ಶ್ರೀ ಪದ್ಮಾವತಿ ಅಮ್ಮ ಹಾಗೂ ಶ್ರೀ ಜ್ವಾಲಾಮಾಲಿನಿ ಅಮ್ಮನವರಿಗೆ ವಿಶೇಷ ಪೂಜಾ ಕಾರ್ಯಕ್ರಮ ಆಯೋಜಿಸಲಾಗಿದೆ.

ಅಕ್ಟೋಬರ್ 11ರ ಭಾನುವಾರದಿಂದ ಅಕ್ಟೋಬರ್ 21ರ ಬುಧವಾರದವರೆಗೆ ವಿಶೇಷ ಪೂಜೆ ನಡೆಯಲಿದೆ. ಈ ಸಂದರ್ಭದಲ್ಲಿ ಭಕ್ತರು ಕುಟುಂಬ ಸಮೇತರಾಗಿ ಆಗಮಿಸಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಚಂದ್ರನಾಥ ಸ್ವಾಮಿಯ ಅನುಗ್ರಹಕ್ಕೆ ಪಾತ್ರರಾಗುವಂತೆ ನವಿಲು ಬಸದಿ ಆಡಳಿತ ಮೊಕ್ತೇಸರರು ಮನವಿ ಮಾಡಿದ್ದಾರೆ.

ಪೂಜಾ ಸಮಯ: ಬೆಳಗ್ಗೆ 8.30ರಿಂದ ಮಧ್ಯಾಹ್ನ 1.30ರವರೆಗೆ ಹಾಗೂ ಸಂಜೆ 5ರಿಂದ ರಾತ್ರಿ 8ರವರೆಗೆ.ಹೆಚ್ಚಿನ ಮಾಹಿತಿಗಾಗಿ 6364050086 ಸಂಪರ್ಕಿಸಬಹುದು.
- Advertisement -








