Sunday, October 4, 2026
spot_imgspot_img
spot_imgspot_img

ವಿದ್ಯುತ್ ಕಂಬಕ್ಕೆ ಬೈಕ್‌ ಢಿಕ್ಕಿ: ರಂಗ ಕಲಾವಿದ ಮೃತ್ಯು

- Advertisement -
- Advertisement -

ಶಿವಮೊಗ್ಗ : ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿಯಾಗಿ ಯುವ ರಂಗ ಕಲಾವಿದ, ಯೋಗಪಟು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊನ್ನಟ್ಟಿ ಹೊಸೂರು ಬಳಿ ನಡೆದಿದೆ.ಭದ್ರಾವತಿಯ ನಿವಾಸಿ ಹರ್ಷ (28) ಮೃತ ಕಲಾವಿದ. ಹರ್ಷ ಅವರು ಯೋಗಪಟು ಹಾಗೂ ರಂಗ ಕಲಾವಿದರಾಗಿ ಗುರುತಿಸಿಕೊಂಡಿದ್ದರು. ಸಂಬಂಧಿಯೊಬ್ಬರನ್ನು ಭದ್ರಾವತಿಗೆ ಬಿಟ್ಟು ಬರಲು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.

ನಿಯಂತ್ರಣ ತಪ್ಪಿದ ಬೈಕ್ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಢಿಕ್ಕಿಯ ರಭಸಕ್ಕೆ ಹರ್ಷ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!