Monday, October 5, 2026
spot_imgspot_img
spot_imgspot_img

ಬಂಟ್ವಾಳ: ಸಿಡಿಲು ಬಡಿದು ಮನೆಗೆ ಹಾನಿ, ಮಹಿಳೆ ಗಂಭೀರ

- Advertisement -
- Advertisement -

ಬಂಟ್ವಾಳ: ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಆನೆದೋಡಿ ಎಂಬಲ್ಲಿ ಸೋಮವಾರ ಮುಂಜಾನೆ ಸಿಡಿಲು ಬಡಿದು ಮನೆಯೊಂದು ಸಂಪೂರ್ಣ ಹಾನಿಗೊಂಡಿದ್ದು, ಮನೆಯಲ್ಲಿದ್ದ ಮಹಿಳೆಯೊಬ್ಬರು ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಅಜ್ಜಿಬೆಟ್ಟು ಗ್ರಾಮದ ಆನೆದೋಡಿ ನಿವಾಸಿ ನಾಗೇಶ್ ಕುಲಾಲ್ ಅವರ ಮನೆಗೆ ಮುಂಜಾನೆ ಸಿಡಿಲು ಬಡಿದಿದೆ. ಸಿಡಿಲಿನ ತೀವ್ರತೆಗೆ ಮನೆಯ ಕಟ್ಟಡ ಹಾಗೂ ಮನೆಯೊಳಗಿನ ವಸ್ತುಗಳಿಗೆ ಹಾನಿಯಾಗಿದ್ದು, ಮನೆ ಸಂಪೂರ್ಣ ಹಾನಿಗೊಂಡಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ನಾಗೇಶ್ ಕುಲಾಲ್ ಅವರ ಪತ್ನಿ ಕುಸಲಾಕ್ಷಿ ಅವರು ತೀವ್ರವಾಗಿ ಗಾಯಗೊಂಡಿದ್ದು, ತಕ್ಷಣ ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪ್ರಥಮ ಚಿಕಿತ್ಸೆ ನೀಡಲಾಗಿದೆ.

ಬಳಿಕ ವೈದ್ಯ ರ ಸಲಹೆ ಮೇರೆಗೆ ಅವರನ್ನು ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಿಂದ ಕುಟುಂಬಸ್ಥರು ಆತಂಕಕ್ಕೊಳಗಾಗಿದ್ದು, ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!