Monday, October 5, 2026
spot_imgspot_img
spot_imgspot_img

ಪಾರಾದೀಪ್ ಪಾಸ್ಪೇಟ್ಸ್ ಲಿಮಿಟೆಡ್ ಪಣಂಬೂರು, ಮಂಗಳೂರು ಇವರ ವತಿಯಿಂದ ಜಸ್ಟಿಸ್ ಕೆ ಎಸ್ ಹೆಗ್ಡೆ ಹಾಸ್ಪಿಟಲ್ ದೇರಳ ಕಟ್ಟೆ ಮತ್ತು ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ಸಹಯೋಗದಲ್ಲಿಉಚಿತ ನೇತ್ರ ತಪಾಸಣಾ ಶಿಬಿರ

- Advertisement -
- Advertisement -

ಪಾರಾದೀಪ್ ಪಾಸ್ಪೇಟ್ಸ್ ಲಿಮಿಟೆಡ್ ಪಣಂಬೂರು, ಮಂಗಳೂರು ಇವರ ವತಿಯಿಂದ ಜಸ್ಟಿಸ್ ಕೆ ಎಸ್ ಹೆಗ್ಡೆ ಹಾಸ್ಪಿಟಲ್ ದೇರಳ ಕಟ್ಟೆ ಮತ್ತು ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ಸಹಯೋಗದಲ್ಲಿ ಅ. 4 ಭಾನುವಾರದಂದು ಉಚಿತ ನೇತ್ರ ತಪಾಸಣಾ ಶಿಬಿರವು ಮಾಣಿಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮುರುವ ಇಲ್ಲಿ ಯಶಸ್ವಿಯಾಗಿ ನಡೆಯಿತು.

ಶಿಬಿರವನ್ನು ಮಾಣಿಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮುರುವ ಇಲ್ಲಿಯ ಶಾಲಾ ಸಂಚಾಲಕರು ಆದ ನಡುಮನೆ ಶ್ರೀ ಮಹಾಬಲ ಭಟ್ ಉದ್ಘಾಟಿಸಿ ಪಾರಾದೀಪ್ ಪಾಸ್ಪೇಟ್ಸ್ ಲಿಮಿಟೆಡ್ ಪಣಂಬೂರು, ಮಂಗಳೂರು ಸಂಸ್ಥೆಯ ಸಮಾಜ ಸೇವೆಯನ್ನು ಶ್ಲಾಘಿಸಿ ಜಸ್ಟಿಸ್ ಕೆ ಎಸ್ ಹೆಗ್ಡೆ ಹಾಸ್ಪಿಟಲ್ ದೇರಳ ಕಟ್ಟೆ ಇವರು ಶಿಬಿರವನ್ನು ನಡೆಸಿಕೊಡುವುದರ ಬಗ್ಗೆ ಅಭಿನಂದಿಸಿದರು.

ಈ ಸಂದರ್ಭ ಕಾರ್ಯಕ್ರಮದಲ್ಲಿ ಕೆಎಸ್ ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಇದರ ಕಣ್ಣಿನ ವಿಭಾಗದ ಮುಖ್ಯಸ್ಥರಾದ ಶ್ರೀ ರಿಷಿಕೇಶ್ ಅಮೀನ್, ಪಾರಾದೀಪ್ ಪಾಸ್ಪೇಟ್ಸ್ ಲಿಮಿಟೆಡ್ (ಪಣಂಬೂರು) ಮಂಗಳೂರು ಇದರ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥರಾದ ಶ್ರೀ ಚೇತನ್ ಮೆಂಡೋನ್ಜಾ ಹಾಗೂ ಮಾಣಿಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮುರುವ ಇಲ್ಲಿಯ ಮುಖ್ಯೋಪಾಧ್ಯಾಯರಾದ ಶ್ರೀ ದಯಾನಂದ ನಾಯಕ್ ಉಪಸ್ಥಿತರಿದ್ದರು.

ಪಾರಾದೀಪ್ ಪಾಸ್ಪೇಟ್ಸ್ ಲಿಮಿಟೆಡ್ (ಪಣಂಬೂರು) ಮಂಗಳೂರು ಇದರ ವೈದ್ಯಾಧಿಕಾರಿ ಡಾ ಯೋಗೀಶ್ ಭಟ್ ಅವರು ನೇತ್ರ ತಪಾಸಣಾ ಶಿಬಿರದ ಮಾಹಿತಿಯನ್ನು ನೀಡಿ ಸ್ವಾಗತಿಸಿದರು ಮತ್ತು ರಂಜಿತ್ ಕುಮಾರ್ ಕೆ ಕಾರ್ಯಕ್ರಮವನ್ನು ನಿರೂಪಿಸಿದರು.

- Advertisement -

Related news

error: Content is protected !!